ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಸಂಸದರ ಸದಸ್ಯತ್ವ ವಜಾಕ್ಕೆ ಕಾಂಗ್ರೆಸ್ ಮನವಿ

By Staff
|
Google Oneindia Kannada News

DK Shivakumar
ಬೆಂಗಳೂರು, ಜೂ. 4 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಡ ಬಿಜೆಪಿ ಸರಕಾರ ಅಧಿಕಾರಿ ಬಳಸಿಕೊಂಡು ಸಾಕಷ್ಟು ಪ್ರಮಾಣದ ಅಕ್ರಮಗಳನ್ನು ನಡೆಸಿ ಅಧಿಕಾರಿ ದುರುಪಯೋಗಪಡಿಸಿಕೊಂಡಿರುವುದು ಸಂಪುಟದ ಹಿರಿಯ ಸಚಿವರಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಣ ಹಂಚಿ ಗೆಲುವು ಸಾಧಿಸಿರುವ ಬಿಜೆಪಿ 19 ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿವಮೂಗ್ಗ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ತಮ್ಮ ಪುತ್ರನನ್ನು ಆರಿಸಿ ತರಲು ಮುಖ್ಯಮಂತ್ರಿ ಸಾಕಷ್ಟು ಅಕ್ರಮಗಳನ್ನು ಎಸಗಿದ್ದಾರೆ ಎಂದು ಸಚಿವ ಈಶ್ವರಪ್ಪ ಮಾಡಿರುವ ಆರೋಪಕ್ಕಿಂತ ಹೆಚ್ಚಿನ ಸಾಕ್ಷಿ ಮತ್ತೇನು ಬೇಕಿದೆ ಎಂದರು.

ತಮ್ಮ ಪುತ್ರನನ್ನು ಗೆಲ್ಲಿಸಲು ಮುಖ್ಯಮಂತ್ರಿ ವಾಮಮಾರ್ಗ ಕಂಡುಕೊಂಡಿದ್ದಲ್ಲದೇ, ಅಧಿಕಾರ ಯಂತ್ರವನ್ನು ಬಳಿಸಿಕೊಂಡಿದ್ದಾರೆ. ಇದು ಕಾನೂನು ಸ್ಪಷ್ಟ ಉಲ್ಲಂಘನೆಯಾಗಿದೆ. ರಾಜ್ಯದಲ್ಲಿ ಆಯ್ಕೆಯಾಗಿರುವ ಬಿಜೆಪಿ ಸಂಸದರು ಇದೇ ಮಾರ್ಗವನ್ನು ಅನುಸರಿಸಿದ್ದಾರೆ. ಆದ್ದರಿಂದ ಈ ಕೂಡಲೇ ಬಿಜೆಪಿ 19 ಮಂದಿ ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿರುವುದಾಗಿ ಶಿವಕುಮಾರ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X