ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಭಿನ್ನಮತ : ರೆಡ್ಡಿ ನೇತೃತ್ವದಲ್ಲಿ ಸಭೆ

By Staff
|
Google Oneindia Kannada News

Janardhan Reddy
ಬೆಂಗಳೂರು, ಜೂ. 5 : ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬಂಡಾಯದ ಬಾವುಟ ಹಾರಿಸಿರುವ ಬಳ್ಳಾರಿಯ ರೆಡ್ಡಿ ಸಹೋದರರು ಇಂದು ಸಚಿವ ಜನಾರ್ದನರೆಡ್ಡಿ ನೇತೃತ್ವದಲ್ಲಿ ಅವರ ಬೆಂಬಲಿಗರ ಸಭೆ ಬೆಂಗಳೂರಿನ ಚಾಲುಕ್ಯ ಹೋಟೆಲ್ ಹಿಂಭಾಗದ ಅಪಾರ್ಟ್ ಮೆಂಟ್ ವೊಂದರಲ್ಲಿ ಶುರುವಾಗಿದ್ದು, ಸಚಿವರು, ಶಾಸಕರು ಮತ್ತು ಬಿಜೆಪಿ ಮುಖಂಡರು ಭಾಗವಹಿಸಿದ್ದಾರೆ. ಆದರೆ, ಅತ್ತ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯು ಆರಂಭವಾಗಿದೆ. ಆದರೆ, ರೆಡ್ಡಿ ಸೇರಿ ಸಭೆಯಲ್ಲಿ ಪಾಲ್ಗೊಂಡಿರುವ ಸಚಿವರು ಸಂಪುಟಗೆ ಸಭೆ ಹಾಜರಾಗುತ್ತಾರಾ ಇಲ್ಲವಾ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ರೆಡ್ಡಿ ಬೆಂಬಲಿಗರ ಸಭೆಯಲ್ಲಿ ಮುಖ್ಯವಾಗಿ ಸಚಿವ ಸ್ಥಾನ ಕಳೆದುಕೊಂಡ ಎಸ್ ಕೆ ಬೆಳ್ಳುಬ್ಬಿ, ಸಚಿವರಾದ ಶ್ರೀರಾಮುಲು, ಶಿವನಗೌಡ ನಾಯಕ್, ಆನಂದ್ ಅಸ್ನೋಟಿಕರ್, ಡಿ, ಸುಧಾಕರ್, ಬಾಲಚಂದ್ರ ಜಾರಕಿಹೊಳಿ, ಬೇಳೂರು ಗೋಪಾಲಕೃಷ್ಣ, ರಾಜುಗೌಡ, ಸಾರ್ವಬೌಮ ಬಗಲಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇತ್ತೀಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವರು ಮತ್ತು ಶಾಸಕರನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬಳ್ಳಾರಿ ಗಣಿ ವಿವಾದಕ್ಕೆ ಸಂಬಂಧಿದಂತೆ ಮುಖ್ಯಮಂತ್ರಿಗಳ ನಿಲುವುಗಳ ಬಗ್ಗೆ ಚರ್ಚೆ ನಡೆಯುತ್ತಿವೆ ಎನ್ನಲಾಗಿದೆ. ಆದರೆ, ಜನಾರ್ದನರೆಡ್ಡಿ ಅವರನ್ನು ಗುರುವಾರ ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿಕೊಂಡು ಚರ್ಚೆ ನಡೆಸಿದ್ದಲ್ಲದೇ, ಭಿನ್ನಮತ ಶಮನಕ್ಕೆ ಮುಂದಾಗಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X