ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಕ್ಷಿಣ ಭಾರತದ ಮೇಲೆ ಲಷ್ಕರ್ ಕಣ್ಣು

By Hafiz Saeed’s aide arrested in Delhi, South India on high alert
|
Google Oneindia Kannada News

Hafeez Saeed
ಬೆಂಗಳೂರು, ಜೂ. 5 : ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಗ್ರಗಾಮಿಗಳು ದಾಳಿ ನಡೆಸುವ ಸಾಧ್ಯತೆ ಇದ್ದು, ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರ ಎಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಭಾರಿ ಕಟ್ಟೆಚ್ಚರ ವಹಿಸುವಂತೆ ಸರಕಾರ ಗೃಹ ಇಲಾಖೆಗೆ ಸೂಚನೆ ನೀಡಿದೆ. ದಾಳಿಯ ಎಚ್ಚರಿಕೆಯ ನಡುವೆಯೇ ದೆಹಲಿಯ ಪೊಲೀಸರು ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಮಹ್ಮದ್ ಒಮರ್ ಮದಾನಿ ಎಂಬಾತನನ್ನು ಬಂಧಿಸಿದ್ದಾರೆ. ಈತ ಭಾರತ ಮತ್ತು ನೇಪಾಳದಲ್ಲಿರವ ಎಲ್ಇಟಿ ಸಂಘಟನೆಯ ಮುಖ್ಯಸ್ಥ ಎಂದು ವಿಚಾರಣೆ ವೇಳೆಯಲ್ಲಿ ತಿಳಿದು ಬಂದಿದೆ.

ಬೆಂಗಳೂರಿನಲ್ಲಿ ಮೂವರು ಅಸ್ಸಾಂ ಉಗ್ರರು ಸೆರೆ

ಪ್ರತ್ಯೇಕ ರಾಜ್ಯದ ಬೇಡಿಕೆಯೊಂದಿಗೆ ಅಸ್ಸಾಂನ ನಾರ್ತ್ ಕಚ್ಚರ್ ಹಿಲ್ಸ್ ಜಿಲ್ಲೆಯಲ್ಲಿ ಉಗ್ರಗಾಮಿ ಕೃತ್ಯದಲ್ಲಿ ತೊಡಗಿರುವ ಅಸ್ಸಾಂ ಡಿಮಾ ಡೌಗಾ ಡಿಎಚ್ ಡಿ(ಜೆ) ಎಂಬ ತೀವ್ರಗಾಮಿ ಸಂಘಟನೆಯ ಮೂವರು ಉಗ್ರರನ್ನು ಬೆಂಗಳೂರಿನಲ್ಲಿ ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಡಿಎಚ್ ಡಿ(ಜೆ) ಸಂಘಟನೆ
ಬ್ಲ್ಯಾಕ್ ವಿಡೋ ಗ್ರೂಫ್ ಮುಖ್ಯಸ್ಥ ಜ್ಯೂವೆಲ್ ಗೋರ್ ಲೂಸ್ (35), ಸಮೀರ್ ಅಹ್ಮದ್ (34) ಮತ್ತು ಪಾರ್ಥವಾರಿಸ(36) ಎಂಬುವವರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ.

ಸಮೀರ್ ಅಹ್ಮದ್ ಬೆಂಗಳೂರಿನ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಇತ್ತೀಚೆಗೆ ಅಸ್ಸಾಂನ ನಾರ್ತ್ ಹಿಲ್ಸ್ ಜಿಲ್ಲೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಿದ ಬಳಿಕ ನಗರದ ಬನ್ನೇರುಘಟ್ಟ ಅಪಾರ್ಟ್ ಮೆಂಟ್ ವೊಂದರಲ್ಲಿ ಈ ಉಗ್ರರು ತಲೆಮರೆಸಿಕೊಂಡಿದ್ದರು. ಬೆಂಗಳೂರು ಜಂಟಿ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಸಿಂಗ್ ಹಾಗೂ ಅಸ್ಸಾಂ ಡಿಐಜಿಪಿ ಜಿ ಪಿ ಸಿಂಗ್ ನೇತೃತ್ವದಲ್ಲಿ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X