ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ಯಾಟಲೈಟ್ ನಕಾಶೆ ಆಧರಿಸಿ ಹಳ್ಳಿಗೆ ರಸ್ತೆ: ಶಾಲಿನಿ

By Staff
|
Google Oneindia Kannada News

ಗುಲಬರ್ಗಾ, ಜೂ.6: ಉಪಗ್ರಹ ಆಧಾರಿತ ನಕಾಶೆಯನ್ನು ಉಪಯೋಗಿಸಿ, ಗುಲಬರ್ಗಾ ಜಿಲ್ಲಾ ಮಾದರಿಯಲ್ಲಿ ಪ್ರತಿಯೊಂದು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ವಿಶೇಷ ಕ್ರಿಯಾ ಯೋಜನೆಯನ್ನು ತಯಾರಿಸಲು ಹೆಚ್‌ಕೆಡಿಬಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಾಗಾರದಲ್ಲಿ ನಿರ್ಣಯ ಕೈಗೊಳ್ಳಲಾಯಿತು ಎಂದು ಮಂಡಳಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಗ್ರಾಮೀಣ ಸಡಕ್ ರೋಜಗಾರ ಯೋಜನೆಯ ಕಾರ್ಯನಿರ್ವಾಹಕ ಅಭಿಯಂತರರು ಎಲ್ಲಾ ಇಲಾಖೆಗಳಿಂದ ಈವರೆಗೆ ಆಗಿರುವ ರಸ್ತೆಗಳ ಡಾಂಬರೀಕರಣವನ್ನು ಗಣನೆಗೆ ತೆಗೆದುಕೊಂಡು ಉಳಿದ ರಸ್ತೆಗಳ ಸಂಪರ್ಕವನ್ನು ಒದಗಿಸಲು ಕಡಿಮೆ ವೆಚ್ಚದಲ್ಲಿ ಈ ಯೋಜನೆ ರೂಪಿಸಿ, ಆಯಾ ಜಿಲ್ಲೆಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಜೂನ್ 12ರೊಳಗೆ ವರದಿ ಸಲ್ಲಿಸಬೇಕು ಎಂದು ಕಾರ್ಯಾಗಾರದಲ್ಲಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X