ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬನಗಿರಿ ನಗರದಲ್ಲಿ ವನಮಹೋತ್ಸವ

By Staff
|
Google Oneindia Kannada News

R Ashoka
ಬೆಂಗಳೂರು, ಜೂ. 8 : ಮನುಕುಲದ ಉಳಿವಿಗಾಗಿ ಗಿಡಗಳನ್ನು ಬೆಳೆಸಿ ಉಳಿಸುವುದು ಅನಿವಾರ್ಯವಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಮಾತ್ರ ಈ ಕಾರ್ಯ ಕೈಗೊಂಡರೆ ಸಾಲದು. ಸರ್ಕಾರೇತರ ಸಂಘ ಸಂಸ್ಥೆಗಳು, ಶಾಲಾ ಕಾಲೇಜುಗಳು ನಗರ ಪಾಲಿಕೆಗಳು ಅಲ್ಲದೆ ಸಾರ್ವಜನಿಕರೂ ಸಹ ಸಸಿ ನೆಡುವ ಕಾರ್ಯದಲ್ಲಿ ಭಾಗವಹಿಸಿ ಪರಿಸರ ಮಾಲಿನ್ಯವನ್ನು ತಡೆಗಟ್ಟುವಲ್ಲಿ ಸಹಕರಿಸಬೇಕು ಎಂದು ಸಾರಿಗೆ ಸಚಿವ ಆರ್ ಅಶೋಕ ಅವರು ತಿಳಿಸಿದರು.

ನಗರದ ಬನಶಂಕರಿ ಮೂರನೇ ಹಂತದ ಬನಗಿರಿ ನಗರದ 60 ಅಡಿ ರಸ್ತೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಇಂದು ಹಮ್ಮಿಕೊಂಡಿದ್ದ ವನಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನ್ನಾಡುತ್ತಾ ನಗರ ಪ್ರದೇಶಗಳು ಬೆಳೆದಂತೆಲ್ಲ ಕಾರ್ಖಾನೆಗಳ ಸ್ಥಾಪನೆ, ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹೀಗೆ ಇತರೆ ಸೌಲಭ್ಯಗಳನ್ನು ಒದಗಿಸಲು ಮರಗಳನ್ನು ಕಡಿಯುವುದು ಅನಿವಾರ್ಯವಾಗುತ್ತಿದೆ. ಆದರೆ ಅದೇ ಪ್ರಮಾಣದಲ್ಲಿ ಸಸಿಗಳನ್ನು ನೆಡುವ ಕಾರ್ಯವಾಗಬೇಕು ಎಂದ ಸಚಿವರು, ಈಗ ನಾವು ಎಚ್ಚೆತ್ತುಕೊಂಡು ಪರಿಸರ ಸಂರಕ್ಷಿಸದಿದ್ದಲ್ಲಿ ಮುಂದಿನ ಪೀಳಿಗೆಯವರು ನಮ್ಮನ್ನು ಎಂದೂ ಕ್ಷಮಿಸುವುದಿಲ್ಲವೆಂದು ಸಚಿವರು ಎಚ್ಚರಿಸಿದರು.

ಈಗ ಬೆಂಗಳೂರಿನಲ್ಲಿ ಪ್ರಾರಂಭಿಸಲಾದ ಅಟಲ್ ಸಾರಿಗೆ ಜನಪ್ರಿಯವಾಗುತ್ತಿದ್ದು, ಸಧ್ಯದಲ್ಲಿಯೇ ಮೈಸೂರು ನಗರಕ್ಕೂ ಸಹ ವಿಸ್ತರಿಸಲು ಕ್ರಮ ಕೈಗೊಳ್ಳಲಾಗುವುದೆಂದು ಸಚಿವರು ತಿಳಿಸಿದರು. ವನಮಹೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ಆರ್. ದೊರೆಸ್ವಾಮಿ ಭಾಗವಹಿಸಿದ್ದರು. ಬನಶಂಕರಿ ದೇವಸ್ಥಾನದ ಅಧ್ಯಕ್ಷ ಎ.ಹೆಚ್. ಬಸವರಾಜು ಅವರು ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಸಸಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು. ಸಮಾರಂಭದ ಅಂಗವಾಗಿ ಶಿವಮೊಗ್ಗ ಸುಬ್ಬಣ್ಣರವರಿಂದ ಸುಗಮ ಸಂಗೀತ ಕಾರ್ಯಕ್ರಮವನ್ನು ಎರ್ಪಡಿಸಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X