ಯಶಸ್ವಿ ವಿಕಾಸ ಸಂಕಲ್ಪ ಸಮಾರಂಭಕ್ಕೆ ಸಿದ್ಧತೆ
ಮಂಗಳೂರು, ಜೂ. 8 : ಅಭಿವೃದ್ಧಿಯನ್ನು ಆಡಳಿತ ಮಂತ್ರವನ್ನಾಗಿಸಿಕೊಂಡ ರಾಜ್ಯ ಸರ್ಕಾರಕ್ಕೆ ಒಂದು ವರ್ಷ ತುಂಬಿದ ಸಂದರ್ಭದಲ್ಲಿ ಜನರಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮೂಡಿಸಲು ವಿಕಾಸ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಮಂಗಳೂರಿನ ಟಿ ಎಂ ಎ ಪೈ ಕನ್ವೆನ್ಷನ್ ಹಾಲ್‌ನಲ್ಲಿ ಜೂನ್ 12ರಂದು ಶುಕ್ರವಾರ ವರ್ಷದ ಸಾಧನೆ ಸಂಭ್ರಮ ಸಮಾರಂಭವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಉದ್ಘಾಟಿಸಲಿರುವರು.
ಅಂದು ಬೆಳಗ್ಗೆ 10 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಮಾರಂಭಕ್ಕೆ ಚಾಲನೆ ದೊರೆಯಲಿದ್ದು, 11.15ಕ್ಕೆ ಮುಖ್ಯಮಂತ್ರಿಗಳು ಆಗಮಿಸಿ ಕಾರ್ಯಕ್ರಮ ಉದ್ಘಾಟಿಸುವರು. ಚಿಕ್ಕಮಗಳೂರು ಜಿಲ್ಲೆಯಿಂದ 400 ಫಲಾನುಭವಿಗಳು, ಉಡುಪಿಯಿಂದ 600 ಫಲಾನುಭವಿಗಳನ್ನು ಹಾಗೂ ಉಳಿದ ಫಲಾನುಭವಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಆರಿಸಲು ನಿರ್ಧರಿಸಲಾಗಿದ್ದು, ಉಳಿದ ಜಿಲ್ಲೆಗಳಿಂದ ಬರುವವರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದು ಸೇರಿದಂತೆ ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ದಿ. ಶನಿವಾರದಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications