ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೇಷಾವರದಲ್ಲಿ ಆತ್ಮಾಹುತಿ ದಾಳಿ : 14 ಸಾವು

By Staff
|
Google Oneindia Kannada News

Peshawar blast
ಪೇಷಾವರ್, ಜೂ. 10 : ನಗರದ ಪ್ರತಿಷ್ಠಿತ ಪರ್ಲ್ ಕಂಟಿನೆಂಟಲ್ ಹೋಟೆಲ್ ನಲ್ಲಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದ್ದರಿಂದ 14 ಮಂದಿ ಮೃತಪಟ್ಟಿದ್ದು, 57 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಘಟನೆಯಲ್ಲಿ ಸಿಕ್ಕಿಕೊಂಡರಲ್ಲಿ ಹೆಚ್ಚು ವಿದೇಶಿಯರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆತ್ಮಾಹುತಿ ದಾಳಿಗೆ 5 ಸ್ಟಾರ್ ಹೋಟೆಲ್ ಪರ್ಲ್ ಕಂಟಿನೆಂಟಲ್ ಸಂಪೂರ್ಣ ನಾಶವಾಗಿ ಹೋಗಿದೆ. ಘಟನೆಯಲ್ಲಿ ಇಬ್ಬರು ವಿದೇಶಿಯರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ಹೋಟೆಲ್ ನ ರಕ್ಷಣಾ ಸಿಬ್ಬಂದಿ ಕಣ್ತಿಪ್ಪಿಸಿ ಇಬ್ಬರು ಬಂದೂಕುಧಾರಿಗಳು ಶಸ್ತ್ರಸಜ್ಜಿತರಾಗಿ ಹೋಟೆಲ್ ಒಳಗೆ ಪ್ರವೇಶಿಸಿ ಈ ಕೃತ್ಯ ಎಸಗಿದ್ದಾರೆ. ವಿದೇಶಿಯರನ್ನು ಗುರಿಯಾಗಿರಿಸಿಕೊಂಡು ಈ ಸ್ಫೋಟ ನಡೆಸಲಾಗಿದೆ ಎಂದು ಗೃಹ ಸಚಿವ ಮಿಯಾನ್ ಇಫ್ತಿಕಾರ್ ಹುಸೇನ್ ತಿಳಿಸಿದ್ದಾರೆ. ತಾಲಿಬಾನ್ ಉಗ್ರರು ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಕೇವಲ ಒಂದೇ ತಿಂಗಳ ಅವಧಿಯಲ್ಲಿ ಪಾಕಿಸ್ತಾನದ ವಿವಿಧ ಪ್ರದೇಶದಲ್ಲಿ 11 ಭೀಕರ ಬಾಂಬ್ ಸ್ಫೋಟ ಘಟನೆಗಳು ನಡೆದಿವೆ. ತಾಲಿಬಾನ್ ಪ್ರದೇಶದಲ್ಲಿ ಪಾಕಿಸ್ತಾನದ ಸೇನಾ ಕಾರ್ಯಾಚರಣೆ ಆರಂಭಿಸಿರುವ ಹಿನ್ನೆಲೆಯಲ್ಲಿ ತಾಲಿಬಾನ್ ಉಗ್ರರು ಸರಕಾರದ ವಿರುದ್ಧ ಪ್ರತಿಕಾರ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X