ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತೀಯ ಮುಸ್ಲಿಮರು ಪ್ರಭಾವಿಗಳಲ್ಲ, ಖುರ್ಷಿದ್

By Staff
|
Google Oneindia Kannada News

ನವದೆಹಲಿ, ಜೂ. 11 : ಭಾರತದಲ್ಲಿರುವ ಮುಸ್ಲಿಂ ಸಮುದಾಯದವರು ದೇಶದಲ್ಲಾಗಲಿ ಅಥವಾ ವಿಶ್ವದಲ್ಲಾಗಲಿ ಪ್ರಭಾವ ಬೀರುವಲ್ಲಿ ವಿಫಲರಾಗಿದ್ದಾರೆ. ಇದೇ ಕಾರಣಕ್ಕೆ ಇತ್ತೀಚಿಗೆ ಕೈರೋದಲ್ಲಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ಮಾತನಾಡಬೇಕಾದರೆ, ಭಾರತದಲ್ಲಿನ ಮುಸ್ಲಿಂ ಸಮುದಾಯದ ಬಗ್ಗೆ ಯಾವ ಹೇಳಿಕೆಯನ್ನೂ ನೀಡಿಲ್ಲ, ಇದೊಂದು ದೊಡ್ಡ ವಿಪರ್ಯಾಸ ಎಂದು ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಸಲ್ಮಾನ್ ಖುರ್ಷಿದ್ ಖೇದ ವ್ಯಕ್ತಪಡಿಸಿದ್ದಾರೆ.

ಒಬಾಮಾ ಇತ್ತೀಚಿನ ತನ್ನ ಭಾಷಣದಲ್ಲಿ ಸೌದಿ ಅರೇಬಿಯಾ, ಆಫ್ರಿಕಾ ಮತ್ತು ಅಮೆರಿಕಾದಲ್ಲಿರುವ ಏಳು ಲಕ್ಷ ಮುಸ್ಲಿಮರ ಬಗ್ಗೆ ಮಾತನಾಡಿದರೆ ಹೊರತು ಭಾರತದಲ್ಲಿನ ಮುಸ್ಲಿಂ ಸಮುದಾಯದ ಬಗ್ಗೆ ಯಾವುದೇ ವಿಷಯ ಪ್ರಸ್ತಾಪಿಸಿಲ್ಲ. ಇದಕ್ಕೆ ಭಾರತದಲ್ಲಿರುವ ಮುಸ್ಲಿಮರು ದೇಶದ ಯಾವುದೇ ವಿಷಯದಲ್ಲಿ ಪ್ರಭಾವ ಬೀರುವಲ್ಲಿ ಯಶಸ್ವಿಯಾಗದೇ ಇರುವುದೇ ಕಾರಣ ಎಂದು ಖುರ್ಷಿದ್ ಹೇಳಿದ್ದಾರೆ.

ಭಾರತೀಯ ಮುಸ್ಲಿಂ ವೈದ್ಯಕೀಯ ಮಂಡಳಿ, ಕೇಂದ್ರದಲ್ಲಿ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಮುಸ್ಲಿಂ ಸಮುದಾಯದವರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರ೦ಭದಲ್ಲಿ ಮಾತನಾಡುತ್ತಾ ಖುರ್ಷಿದ್, ಇತರ ಸಮುದಾಯದಂತೆ ಮುಸ್ಲಿಂ ಸಮುದಾಯಕ್ಕೆ ಬೇಕಾಗಿರುವ ಎಲ್ಲ ಸೌಲಭ್ಯಗಳನ್ನು ಒದಗಿಸಲು ನನ್ನ ಸಚಿವಾಲಯ ಶ್ರಮಿಸುತ್ತದೆ. ಮುಸ್ಲಿಂ ಸಮುದಾಯದ ಏಳಿಗೆಗೆ 'ಸಾಚಾರ್ ಸಮಿತಿ'ಯ ಶಿಫಾರಸನ್ನು ನಾನು ಬೆಂಬಲಿಸುತ್ತೇನೆ ಎಂದು ಸಚಿವ ಖುರ್ಷಿದ್ ಈ ಸಮಾರ೦ಭದಲ್ಲಿ ಹೇಳಿಕೆ ನೀಡಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X