ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರಣ್ಯ ಪ್ರದೇಶದ ಗಣಿಗಾರಿಕೆ ತಡೆಗೆ ಕ್ರಮ

By Super
|
Google Oneindia Kannada News

Jairam Ramesh
ಬೆಂಗಳೂರು, ಜೂ. 11 : ಬಳ್ಳಾರಿ ಅರಣ್ಯ ವಲಯದಲ್ಲಿ ಗಣಿಗಾರಿಕೆ ನಡೆಯುತ್ತಿದ್ದಲ್ಲಿ ಯಾವುದೇ ಮುಲಾಜಿಲ್ಲದೆ ನಿಲ್ಲಿಸುವ ಕ್ರಮಕೈಗೊಳ್ಳುತ್ತೇನೆ ಎಂದು ಕೇಂದ್ರದ ಪರಿಸರ ಹಾಗೂ ಅರಣ್ಯ ಖಾತೆಯ ರಾಜ್ಯ ಸಚಿವ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಈ ಕುರಿತು ಸದ್ಯದಲ್ಲೇ ವರದಿ ತರಿಸಿಕೊಳ್ಳುತ್ತೇನೆ. ಒಂದು ವೇಳೆ ಅರಣ್ಯ ವ್ಯಾಪ್ತಿಗೆ ಒಳಪಡುವ ಪ್ರದೇಶದಲ್ಲಿ ಗಣಿಗಾರಿಕೆ ನಡೆಯುತ್ತಿದ್ದರೆ, ಇದು 1980 ರ ಅರಣ್ಯ ಸಂರಕ್ಷಣಾ ಕಾಯ್ದೆಯ ಸ್ಪಷ್ಟ ಉಲ್ಲಂಘನೆ ಆಗುತ್ತಿದೆ. ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಇದರಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 1300 ಕುಟುಂಬಗಳನ್ನು ಸ್ಥಳಾಂತರಿಸಿ, ಪುನರ್ ವಸತಿ ಕಲ್ಪಿಸುವ ಕುರಿತು ರಾಜ್ಯ ಸರಕಾರ ಈಗಾಗಲೇ ಕೇಂದ್ರಕ್ಕೆ ಮನವಿ ಸಲ್ಲಿಸಿದೆ. ಇದಕ್ಕೆ ಸಹಮತವಿದ್ದು, ಈ ಸಂಬಂಧ ಸಂಪೂರ್ಣ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ತಿಳಿಸಿದ್ದೇನೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವನ್ಯ ಸಂಪತ್ತನ್ನು ಉಳಿಸಲು ಮತ್ತು ಈ ಭಾಗದ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಯೋಜನೆ ಒತ್ತಾಸೆ ನೀಡಲಿದೆ ಎಂದು ಜೈರಾಮ್ ರಮೇಶ್ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X