ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಮೆರಿಕದ ಯೇಲ್ ವಿವಿಯಲ್ಲಿ ಎಚ್ಡಿಕೆ ಉಪನ್ಯಾಸ

By Staff
|
Google Oneindia Kannada News

H D Kumaraswamy
ಬೆಂಗಳೂರು, ಜೂ. 12 : ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಹಾಗೂ ಅಮೆರಿಕದ ಹಾಲಿ ವಿದೇಶಾಂದ ಕಾರ್ಯದರ್ಶಿ ಹಿಲರಿ ಕ್ಲಿಂಟನ್ ಅವರು ಕಾನೂನು ವ್ಯಾಸಂಗ ಮಾಡಿದ ಹಾಗೂ ರಿಲೈಯನ್ಸ್ ಮಾಲೀಕ ಮುಖೇಶ್ ಅಂಬಾನಿ ಅವರ ಮಗಳು ಇಶಾ, ಇನ್ಫೋಸಿಸ್ ಸಹಸಂಸ್ಥಾಪಕ ನಂದನ್ ನಿಲೇಕಣಿ ಅವರ ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿರುವ ಅಮೆರಿಕ ಪ್ರತಿಷ್ಠಿತ ಯಾಲೆ ವಿಶ್ವವಿದ್ಯಾಲಯಕ್ಕೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಜಿ ಕುಮಾರಸ್ವಾಮಿ ಅವರು ಉಪನ್ಯಾಸಕ್ಕೆ ತೆರಳಲಿದ್ದಾರೆ.

ಇದೇ 21 ರಂದು ಯಾಲೆ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ನಾಯಕತ್ವ, ನಿರ್ವಹಣೆ ಮತ್ತು ಅಂತಾರಾಷ್ಟ್ರೀಯ ಸಂಬಂಧಗಳ ಕುರಿತ ವಿಚಾರ ಸಂಕಿರಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಮುಖಂಡ ಅಭಿಷೇಕ್ ಸಾಘ್ವಿ ನೇತೃತ್ವದಲ್ಲಿ ಅಮೆರಿಕಕ್ಕೆ ತೆರಳಲಿರುವ ಭಾರತೀಯ ಸಂಸದದ ನಿಯೋಗದಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳುವರು. ಯಾಲೆ ಮತ್ತು ಭಾರತ ಸಂಸದೀಯ ನಾಯಕತ್ವ ಕಾರ್ಯಕ್ರಮದ ಅಡಿ ಈ ಪ್ರವಾಸವನ್ನು ಆಯೋಜಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ, ಯಾಲೆಯಂತಹ ದೊಡ್ಡ ವಿಶ್ವವಿದ್ಯಾಯಲಗಳನ್ನು ಈವರೆಗೂ ನೋಡಿಲ್ಲ. ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರ ಆಡಳಿತದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಈಗ ಅವಕಾಶ ಸಿಕ್ಕಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X