ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಇಲ್ಲ: ಬಿಜೆಪಿ

By Staff
|
Google Oneindia Kannada News

No Action Against Jaswant Singh: BJP
ನವದೆಹಲಿ, ಜೂ.13:ಬಿಜೆಪಿಯ ಹಿರಿಯ ನಾಯಕ ಜಸ್ವಂತ್ ಸಿಂಗ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವ ಸಾಧ್ಯತೆಯನ್ನು ಬಿಜೆಪಿ ಅಲ್ಲಗೆಳೆದಿದೆ. ಅವರು ಮಾಡಿರುವ ಆರೋಪಗಳನ್ನು ಪಕ್ಷದ ನಾಯಕರ ವಿರುದ್ಧ ಮಾಡಲಾಗಿರುವ ಆಪಾದನೆ ಎಂದು ಅರ್ಥೈಸಿಕೊಳ್ಳುವುದು ತಪ್ಪು ಪಕ್ಷ ಸ್ಪಷ್ಟಪಡಿಸಿದೆ.

ಜಸ್ವಂತ್ ಪಕ್ಷದ ಹಿತದೃಷ್ಟಿಯಿಂದ ಹಲವಾರು ವಿಚಾರ ಪ್ರಸ್ತಾಪಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಅಷ್ಟು ಸರಿಯಲ್ಲ ಎಂಬುದು ಪಕ್ಷದ ಹಿರಿಯ ನಾಯಕರ ಅಭಿಪ್ರಾಯ. ಜಸ್ವಂತ್ ವಿರುದ್ಧ ಕ್ರಮಕೈಗೊಳ್ಳಲಾಗುತ್ತದೆ ಎಂಬ ಮಾಧ್ಯಮಗಳ ವರದಿಯಲ್ಲಿ ಹುರುಳಿಲ್ಲ ಎಂದು ಪಕ್ಷದ ವಕ್ತಾರ ರಾಜೀವ್ ಪ್ರತಾಪ್ ರೂಡಿ ವರದಿಗಾರರಿಗೆ ತಿಳಿಸಿದರು.

ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಪಕ್ಷದ ನಾಯಕರಲ್ಲಿ ಸಮನ್ವಯ ಕೊರತೆ ಇದೆ. ಸಾಧನೆ ಮತ್ತು ಹೊಣೆಗಾರಿಕೆ ವಹಿಸುವಲ್ಲೂ ತಾರತಮ್ಯ ಮಾಡಲಾಗುತ್ತಿದೆ ಎಂದು ಜಸ್ವಂತ್ ಬುಧವಾರ ನಡೆದ ಪಕ್ಷದ ಕೋರ್ ಸಮಿತಿಯಲ್ಲಿ ಆಪಾದಿಸಿದ್ದರು.

(ಏಜೆನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X