ಶಿವಮೊಗ್ಗ ಕಂದಾಯಾಧಿಕಾರಿ ಮಂಜುನಾಥ್ ಅಮಾನತು
ಶಿವಮೊಗ್ಗ,
ಜೂ. 16 : ಲಂಚ ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದ ನಗರಸಭೆ ಕಂದಾಯ ನಿರೀಕ್ಷಕ ಮಂಜುನಾಥ್ ಅವರನ್ನು ಜಿಲ್ಲಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದು, ಕಂದಾಯ ಅಧಿಕಾರಿ ಗುತ್ತಿ ಕಣ್ಣಪ್ಪ ಅವರನ್ನೂ ವಜಾಗೊಳಿಸಿದ್ದಾರೆ. id="toptextpromo">ಗುತ್ತಿ
ಕಣ್ಣಪ್ಪ ಅವರು ಕಳೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರಿಗೆ ಗೌರವ ಕೊಡದೆ ಮಾತನಾಡಿದ್ದಾರೆ ಎಂಬ ಕಾರಣಕ್ಕಾಗಿ ರಜೆ ಮೇಲೆ ತೆರಳುವಂತೆ ಸೂಚಿಸಲಾಗಿತ್ತು. ಪ್ರಸ್ತುತ ಕಡತ ವಿಲೇವಾರಿ ಮಾಡದೆ ಕರ್ತವ್ಯಲೋಪ ಎಸಗಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ, ಕಂದಾಯ ವಿಭಾಗದ ಕೆಲವು ನೌಕರರು ಕರ್ತವ್ಯದಲ್ಲಿ ಲೋಪವೆಸಗಿದ ಕಾರಣಕ್ಕಾಗಿ ಅವರಿಗೆ ನೋಟೀಸ್ ಜಾರಿಗೊಳಿಸಲಾಗಿದೆ. id='are-slot-1' class='oiad oi-axt oiadv'> id='top-searched-articles'>ನಗರಸಭೆಗೆ
ಸೋಮವಾರದಂದು ದಿಢೀರ್ ಭೇಟಿ ನೀಡಿದ್ದ ಜಿಲ್ಲಾಧಿಕಾರಿಯವರು ಕಂದಾಯ ವಿಭಾಗದ ಕಡತಗಳನ್ನು ಪರಿಶೀಲಿಸಿದ್ದರು. ಜೊತೆಗೆ ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್ ಹಾಗೂ ಸದಸ್ಯರ ಕೋರಿಕೆಯ ಮೇರೆಗೆ ವಿಲೇವಾರಿಯಾಗದೆ ಉಳಿದಂತಹ ಕಡತಗಳನ್ನು ಪರಿಶೀಲಿಸಿ ವಿಲೇವಾರಿ ವಿಳಂಬಕ್ಕೆ ಕಾರಣವೇನೆಂದು ಕಂದಾಯ ವಿಭಾಗದ ಅಧಿಕಾರಿಗಳನ್ನು ಪ್ರಶ್ನಿಸಿದ್ದರು. ಅನಗತ್ಯವಾಗಿ ಕಡತಗಳನ್ನು ಉಳಿಸಿಕೊಂಡಿದ್ದರ ಬಗ್ಗೆ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಾಕಿ ಉಳಿದಿರುವ ಕಡತಗಳ ವಿಲೇವಾರಿಯನ್ನು ಒಂದು ವಾರದೊಳಗೆ ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ, ಶಿಸ್ತುಕ್ರಮ ಕೈಗೊಳ್ಳಬೇಕಾಗುತ್ತದೆಂದು ಎಚ್ಚರಿಸಿದ್ದಾರೆ.











Click it and Unblock the Notifications