ಅಡ್ವೋಕೇಟ್ ಜನರಲ್ ಹೊಳ್ಳ ರಾಜೀನಾಮೆ
ಬೆಂಗಳೂರು,
ಜೂ. 16 : ವೈಯಕ್ತಿಕ ಕಾರಣಗಳಿಂದ ರಾಜ್ಯ ಅಡ್ವೋಕೇಟ್ ಜನರಲ್ ಉದಯ್ ಹೊಳ್ಳ ಅವರು ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ರಾಮೇಶ್ವರ್ ಠಾಕೂರ್ ಅವರನ್ನು ಭೇಟಿ ಮಾಡಿದ ಹೊಳ್ಳ ತಮ್ಮ ರಾಜೀನಾಮೆ ಪತ್ರವನ್ನು ಸ್ವೀಕರಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕಾನೂನು ಸಚಿವ ಸುರೇಶ್ ಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ನಂತರ ರಾಜ್ಯಪಾಲರನ್ನು ಭೇಟಿ ಮಾಡಿ ಪತ್ರ ಸಲ್ಲಿಸಿರುವುದಾಗಿ ನಿರ್ಗಮಿತ ಹೊಳ್ಳ ತಿಳಿಸಿದ್ದಾರೆ. id="toptextpromo">ಅಡ್ವೋಕೇಟ್
ಜನರಲ್ ಹುದ್ದೆಗೆ ರಾಜೀನಾಮೆ ನೀಡದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು. ಆದರೆ, ವೈಯಕ್ತಿಕ ಕಾರಣಗಳಿಂದ ನಾನು ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಹೊಳ್ಳ ಸ್ಪಷ್ಟಪಡಿಸಿದರು. ಸರಕಾರ ಹಾಗೂ ನನ್ನ ನಡುವೆ ಯಾವುದೇ ಸಂಘರ್ಷ ಇರಲಿಲ್ಲ. ನನ್ನ ರಾಜೀನಾಮೆಯಲ್ಲಿ ಸರಕಾರದ ಪಾತ್ರ ಏನೂ ಇಲ್ಲ. ನಾನು ಈ ಹುದ್ದೆಯಲ್ಲಿ ಇರುವಷ್ಟು ದಿನ ರಾಜ್ಯ ಸಾಧ್ಯವಾದಷ್ಟು ನ್ಯಾಯ ದೊರಕಿಸಿಕೊಟ್ಟಿದ್ದೇನೆ ಎಂದು ಅವರು ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications