ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಜೈಟ್ಲಿ ರಾಜೀನಾಮೆ

By Staff
|
Google Oneindia Kannada News

Arun Jaitley
ನವದೆಹಲಿ, ಜೂ. 16 : ಲೋಕಸಭೆ ಚುನಾವಣೆ ರಣತಂತ್ರ ರೂಪಿಸಿದ್ದ ಬಿಜೆಪಿ ಹಿರಿಯ ಮುಖಂಡ ಅರುಣ್ ಜೈಟ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದ ಅತೀ ಶಿಸ್ತಿನ ಪಕ್ಷವೆಂದು ತನ್ನು ಬೆನ್ನು ತಟ್ಟಿಕೊಳ್ಳುವ ಬಿಜೆಪಿಯಲ್ಲಿ ಭಿನ್ನಾಭಿಪ್ರಾಯಗಳ ಹೊಗೆಯಾಡುತ್ತಿದ್ದ ಪಕ್ಷದಲ್ಲಿ ಅಸಮಾಧಾನದ ರೌದ್ರಾವತಾರ ತಾಳಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಬಿಜೆಪಿಯಲ್ಲಿ ಒಬ್ಬ ಒಂದು ಜವಾಬ್ದಾರಿ ಎಂಬ ನಿಯಮವನ್ನು ಪಾಲಿಸಲಾಗುತ್ತಿದೆ. ಅರುಣ್ ಜೈಟ್ಲಿ ರಾಜ್ಯಸಭಾ ಪ್ರತಿಪಕ್ಷದ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದರು. ಲೋಕಸಭೆ ಚುನಾವಣೆ ತಂತ್ರ ರೂಪಿಸಿದವರಲ್ಲಿ ಅರುಣ್ ಜೈಟ್ಲಿ ಪ್ರಮುಖರು. ಪಕ್ಷ ಚುನಾವಣೆಯಲ್ಲಿ ದಯನೀಯವಾಗಿ ಸೋತಿರುವ ಹಿನ್ನೆಲೆಯಲ್ಲಿ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ನಾಯಕ ಜಸ್ವಂತ್ ಸಿಂಗ್ ಮತ್ತು ಯಸವಂತ್ ಸಿನ್ಹಾ ಬಹಿರಂಗ ಹೇಳಿಕೆ ನೀಡಿದ್ದರು.

ಯಶವಂತ್ ಸಿನ್ಹಾ ಅವರಂತೂ ಪಕ್ಷದ ನಾಯಕರ ಧೋರಣೆ ಖಂಡಿಸಿ ಸಂಸದ ಸ್ಥಾನ ಹೊರತುಪಡಿಸಿ ಪಕ್ಷದ ಎಲ್ಲ ಸ್ಥಾನಗಳಿಗೂ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಯಶವಂತ್ ಸಿನ್ಹಾ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್, ಪಕ್ಷದಲ್ಲಿ ಅಶಿಸ್ತಿನಿಂದ ನಡೆದಪಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X