36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg122883davangereದಾವಣಗೆರೆಯಿಂದ ಮಹಿಮಾ ಪಟೇಲ್ ಕಣಕ್ಕೆ/news/2009/03/19/mahima-patel-may-enter-fray-as-independent.htmlದಾವಣಗೆರೆ, ಮಾ. 19 : ಕಳೆದ ವಿಧಾನಸಭೆ ಚುನಾವಣೆ ಮುನ್ನ ನೂತನ ಪಕ್ಷ ಸ್ಥಾಪಿಸಿ ವಿನೂತನ ರೀತಿಯಯಲ್ಲಿ ಪ್ರಚಾರ ಕಾರ್ಯ ಮಾಡಿದ್ದ ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ರ ಮಗ ಮಾಜಿ ಶಾಸಕ ಮಹಿಮಾ ಪಟೇಲ್ ದಾವಣಗೆರೆ ಲೋಕಸಭೆ ಕ್ಷೇತ್ರದಿಂದ ಸುವರ್ಣ ಯುಗ ಪಕ್ಷ ಇಲ್ಲವೇ ಪಕ್ಷೇತರರಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಹಿಮಾ 35354http://kannada.oneindia.com/img/2009/03/19-mahima-patel1.jpg122883davangereಕೋಮುವಾದಿಗಳಿಗೆ ಮತ ನೀಡಬೇಡಿ, ಸೋನಿಯಾ/news/2009/03/23/sonia-targets-bjp-launching-congress-campaign.htmlದಾವಣಗೆರೆ, ಮಾ. 23 : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದಾವಣಗೆರೆಯಿಂದ ಅಧಿಕೃತವಾಗಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಕಾರ್ಯವನ್ನು ಐಎಸಿಸಿ ನಾಯಕಿ ಸೋನಿಯಾ ಗಾಂಧಿ ಉದ್ಘಾಟಿಸಿದರು. ಪಕ್ಷದ ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಗುಲಾಮ್ ನಬಿ ಅಜಾದ್, ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಮತ್ತು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ವೇದಿಕೆ ಮೇಲೆ ಉಪಸ್ಥಿತರಿದ್ದರು. 35447http://kannada.oneindia.com/img/2009/03/23-sonia1.jpg122883davangereದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ /news/2009/06/16/yeddyurappa-faces-series-of-protest-in-davangere.htmlದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು. ಮಂಗಳವಾರ ಬೆಳಗ್ಗೆ 37386http://kannada.oneindia.com/img/2009/06/16-davanagere-vikasa-sankalp1.jpg122883davangereಹೊನ್ನಾಳಿ ಶಾಸಕ ರೇಣುಕಾಚಾರ್ಯ ಬಂಧನ/news/2009/06/29/code-of-conduct-violation-mla-renukacharya-held.htmlದಾವಣಗೆರೆ, ಜೂ. 29:ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರನ್ನು ಇಂದು ಬಂಧಿಸಲಾಗಿದೆ. ಮೇ ನಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ಶಾಸಕರು ನೀಡಿದ್ದರು.ಹಿಂದೂ ವಿರೋಧಿ ಭಾಷಣಕಾರರ ವಿರುದ್ಧ ಕಿಡಿಕಾರಿದ್ದ ಶಾಸಕ ರೇಣುಕಾಚಾರ್ಯ ಅವರು, ಹಿಂದೂ ವಿರೋಧಿ ಹೇಳಿಕೆ ನೀಡುವವರ 37651http://kannada.oneindia.com/img/2009/06/29-renukacharya1.jpg122883davangereಮಾಜಿ ಶಾಸಕ ಮಹಿಮಾ ಪಟೇಲ್ ಕಾಂಗ್ರೆಸ್ ಗೆ ?/news/2009/07/21/former-mla-mahima-patel-likely-to-join-congress.htmlಚನ್ನಗಿರಿ, ಜು. 21 : ಮಾಜಿ ಮುಖ್ಯಮಂತ್ರಿ ಜೆ ಎಚ್ ಪಟೇಲ್ ಅವರ ಮಗ ಹಾಗೂ ಸ್ವರ್ಣಯುಗ ಪಕ್ಷ ಸ್ಥಾಪನೆ ಮಾಡಿ ವಿನೂತನ ರಾಜಕಾರಣ ಮಾಡಹೊರಟಿದ್ದ ಮಾಜಿ ಶಾಸಕ ಮಹಿಮಾ ಪಟೇಲ್ ಕೊನೆಗೂ ಸೋಲುವ ಮೂಲಕ ಅವರು ಕಾಂಗ್ರೆಸ್ ಪಕ್ಷದ ಕಡೆಗೆ ಮುಖ ಮಾಡಿದ್ದಾರೆ. ಸೋಮವಾರ ಇಲ್ಲಿ ಜೆ ಎಚ್ ಪಟೇಲ್ ಅಬಿಮಾನಿ ಬಳಗದ ಸಭೆಯಲ್ಲಿ ಮಾತನಾಡಿದ 38110http://kannada.oneindia.com/img/2009/07/21-mahima1e.jpg124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpgnews"> ದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ | Yeddyurappa | Vikas Sankalpa Yatre | Davangere | Hubballi | Jagadish Shettar | Ananthkumar| ದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ - Kannada Oneindia

ದಾವಣಗೆರೆಯಲ್ಲಿ ಸಿಎಂಗೆ ಘೇರಾವ್ : ಶೆಟ್ಟರ್ ಗರಂ

ದಾವಣಗೆರೆ, ಹುಬ್ಬಳ್ಳಿ, ಜೂ. 16 : ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ವಿಕಾಸ ಸಂಕಲ್ಪ ಜಾತ್ರೆಯನ್ನು ಸರಕಾರ ಕೈಗೊಂಡಿದೆ. ಮಂಗಳವಾರ ದಾವಣಗೆರೆಯಲ್ಲಿ ಆಯೋಜಿಸಲಾಗಿದ್ದ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವಿವಿಧ ಸಂಘಟನೆಗಳಿಂದ ಪ್ರತಿಭಟನೆ, ಘೇರಾವ್, ಧಿಕ್ಕಾರ ಘೋಷಣೆಗಳನ್ನು ಎದುರಿಸಬೇಕಾಯಿತು. ಇದರಿಂದ ಸಿಎಂ ಕೆಲ ಕಾಲ ಕಸಿವಿಸಿಗೆ ಒಳಗಾಗಬೇಕಾಯಿತು.

ಮಂಗಳವಾರ ಬೆಳಗ್ಗೆ ವಿಕಾಸ ಸಂಕಲ್ಪ ಕಾರ್ಯಕ್ರಮ ಭಾಗವಹಿಸಲು ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿಗಳಿಗೆ ಸರಕಾರಿ ವಸತಿ ಗೃಹದಲ್ಲಿ ವಿಶ್ರಾಂತಿಗೆಂದು ತಂಗಿದ್ದರು. ಆಗ, ರೈತ ಸಂಘಟನೆಯ ಮುಖಂಡರು ಹಾಗೂ ನೂರಾರು ರೈತರು ಜಿಲ್ಲೆಯಲ್ಲಿ ಕಾರ್ಯಸ್ಥಗಿತಗೊಂಡಿರುವ ಭದ್ರಾ ಸಕ್ಕರೆ ಕಾರ್ಖಾನೆಯನ್ನು ಪುನರ್ ಆರಂಭಿಸಬೇಕು ಎಂಬ ಬೇಡಿಕೆಯನ್ನು ಸಿಎಂ ಮುಂದಿಟ್ಟರು. ಈ ಸಂದರ್ಭದಲ್ಲಿ ರೈತರು ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದರು. ನಂತರ ರೈತರೊಂದಿಗೆ ಮಾತನಾಡಿದ ಯಡಿಯೂರಪ್ಪ, ಸಕ್ಕರೆ ಕಾರ್ಖಾನೆಗಳನ್ನು ಸರಕಾರ ಆರಂಭಿಸಬೇಕು ಎನ್ನುವುದು ಆಗದ ಮಾತು. ಆದರೆ, ಖಾಸಗಿ ಕಂಪನಿಗಳು ಯಾರಾದರೂ ಮುಂದೆ ಬಂದಲ್ಲಿ ಅವರಿಗೆ ಸಂಪೂರ್ಣ ಸಹಾಯ ನೀಡಲಾಗುವುದು. ಶೀಘ್ರದಲ್ಲಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸಭೆ ಕರೆದು ಸಮಸ್ಯೆ ಬಗೆಹರಿಸುವುದಾಗಿ ಹೇಳಿದರು.

ನಂತರ ಕಾರ್ಯಕ್ರಮ ಮುಗಿದ ನಂತರ ಇನ್ನೇನು ಹೊರಡಬೇಕು ಎನ್ನುವಷ್ಟರಲ್ಲಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿ ಸಿಎಂ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದರು. ಇನ್ನೊಂದಡೆ ಸಾದರ ಲಿಂಗಾಯತ ಜನರು ಸಿಎಂಗೆ ಅವರಿಗೆ ಘೇರಾವ್ ಹಾಕಿದರು. ಇತ್ತೀಚೆಗೆ ಸಾದರ ಲಿಂಗಾಯಿತ ಜನಾಂಗವನ್ನು ಪ್ರವರ್ಗ 'ಬಿ' ಗೆ ಸೇರಿಸಿ ಸರಕಾರ ಸುತ್ತೋಲೆ ಹೊರಡಿಸಿತ್ತು. ಅದನ್ನು ಸರಕಾರದ ಗಮನಕ್ಕೆ ತಾರದೇ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಯೊಬ್ಬರು ಹೊರಡಿಸಿದ್ದ ಸುತ್ತೋಲೆಯನ್ನು ಸರಕಾರ ವಾಪಸ್ಸು ಪಡೆದುಕೊಂಡಿತ್ತು. ಸರಕಾರದ ಕ್ರಮವನ್ನು ಖಂಡಿಸಿ ಸಾದು ಲಿಂಗಾಯಿತ ಸಮುದಾಯದವರು ಯಡಿಯೂರಪ್ಪ ಅವರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.

ಕೃಷ್ಣಯ್ಯ ಶೆಟ್ಟಿ ರಾಜೀನಾಮೆ?;ಶೆಟ್ಟರ್ ಗರಂ

ಸದ್ಯ ತಿರುಪತಿ ಪ್ರವಾಸದಲ್ಲಿರುವ ವಸತಿ ಸಚಿವ ಕೃಷ್ಣಯ್ಯ ಶೆಟ್ಟಿ ಆವರು ಅಲ್ಲಿಂದ ಬೆಂಗಳೂರಿಗೆ ಬಂದ ನಂತರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಅವರ ಆಪ್ತಮೂಲಗಳು ತಿಳಿಸಿವೆ. ಅರುಣ್ ಜೈಟ್ಲಿ ಬಂದು ಹೋದ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಶಮನವಾಯಿತು ಎನ್ನುವಷ್ಟರಲ್ಲಿ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿರುವ ವಿಕಾಸ ಸಂಕಲ್ಪ ಸಮಾವೇಶಕ್ಕೆ ಸ್ಪೀಕರ್ ಜಗದೀಶ್ ಶೆಟ್ಟರ್ ಗೈರು ಹಾಜರಾಗುವ ಮೂಲಕ ತಮ್ಮ ಅಸಮಾಧಾನ ಬಹಿರಂಗಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸ್ಪೀಕರ್ ಜಗದೀಶ್ ಶೆಟ್ಟರ್, ಸ್ಪೀಕರ್ ಸ್ಥಾನಕ್ಕೆ ನೀಡಬೇಕಾದ ಗೌರವವನ್ನು ಸರಕಾರ ನೀಡಿಲ್ಲ. ಸಮಾವೇಶಕ್ಕೆ ಆಗಮಿಸುವಂತೆ ಜಿಲ್ಲಾಧಿಕಾರಿಗಳು ನನಗೆ ತಿಳಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶೆಟ್ಟರ್ ಮುನಿಸು ಶಮನಗೊಳಿಸಲು ಅನಂತಕುಮಾರ್ ಹಾಗೂ ಸಚಿವ ಶ್ರೀರಾಮುಲು ಧಾವಿಸಿದ್ದು, ಸಮಾವೇಶಕ್ಕೆ ಪಾಲ್ಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಶೆಟ್ಟರ್ ಕೂಡಾ ಸಚಿವ ಸ್ಥಾನದ ಅಕಾಂಕ್ಷಿಯಾಗಿದ್ದಾರೆ. ಸೋಮಣ್ಣಗೆ ಮಾತ್ರ ಸಚಿವ ಸ್ಥಾನ ನೀಡಲು ಸಿಎಂ ಮನಸ್ಸು ಮಾಡಿದ್ದು, ಶೆಟ್ಟರ್ ಕೋಪಕ್ಕೆ ಕಾರಣ ಎನ್ನಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+