ಶೀಘ್ರದಲ್ಲಿ ವಿದ್ಯುತ್ ದರ ಏರಿಕೆ : ಈಶ್ವರಪ್ಪ

ಮುಂದಿನ ದಿನಗಳಲ್ಲಿ ವಿದ್ಯುತ್ ದರವನ್ನು ಏರಿಸುವ ಕುರಿತಂತೆ ಸರಕಾರ ಚಿಂತನೆ ನಡೆಸಿದೆ. ಅಲ್ಲದೇ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ನಗರಗಳ ವಾಣಿಜ್ಯ ಕಟ್ಟಡಗಳಿಗೆ ಸೋಲಾರ್ ವಿದ್ಯುತ್ ಬಳಕೆ ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ ಎಂದು ಈಶ್ವರಪ್ಪ ಬುಧವಾರ ಶಿವಮೊಗ್ಗದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಈ ಕುರಿತು ಮೂರು ತಿಂಗಳಲ್ಲಿ ನೂತನ ನಿಯಮಾವಳಿ ರೂಪಿಸಲಾಗುವುದು. ಅಲ್ಲದೇ ಮುಂಬರುವ ದಿನಗಳಲ್ಲಿ ಕಟ್ಟಲಾಗುವ ಕಟ್ಟಡಗಳಿಗೆ ಸೋಲಾರ್ ವಿದ್ಯುತ್ ವಿದ್ಯುತ್ ಬಳಕೆ ಕಡ್ಡಾಯಗೊಳಿಸಲಾಗುವುದು ಎಂದು ಈಶ್ವರಪ್ಪ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications