ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು

By Staff
|
Google Oneindia Kannada News

Cabinet nod for Premji-funded private varsity
ಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ ಆರಂಭವಾಗುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲು ಒಪ್ಪಿಗೆ ಸೂಚಿಸಿತು.

ಶಿಕ್ಷಕರ ತರಬೇತಿ, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಕೋರ್ಸ್ ಗಳು, ಬೋಧಕೇತರ ಸಿಬ್ಬಂದಿಗೆ ತರಬೇತಿ ನೀಡುವ ಕೋರ್ಸ್ ಗಳ ಶಿಕ್ಷಣ ಈ ವಿಶ್ವವಿದ್ಯಾಲಯ ನೀಡಲಿದೆ. ವಿವಿ ಸ್ಥಾಪನೆಗೂ ಮುನ್ನ ರು.25 ಕೋಟಿ ದತ್ತಿನಿಧಿಯನ್ನು ಸರಕಾರದಲ್ಲಿ ಇಡಬೇಕು. ವಿದ್ಯಾರ್ಥಿಗಳ ಪ್ರವೇಶಕ್ಕೆ ನಿಗದಿಪಡಿಸಿದ ಶುಲ್ಕ ಮತ್ತು ನೇಮಕಾತಿ ವಿಚಾರದಲ್ಲಿ ಸರಕಾರದ ಹಿಡಿತ ಇರುವುದಿಲ್ಲ.

ವಿವಿಯನ್ನು ಎಲ್ಲಿ ಸ್ಥಾಪಿಸಬೇಕು ಎಂಬ ಬಗ್ಗೆ ಸ್ಥಳನಿಗದಿಯಾಗಿಲ್ಲ. ಮಸೂದೆಗೆ ಉಭಯ ಸದನಗಳಲ್ಲಿ ಒಪ್ಪಿಗೆ ಸಿಕ್ಕ ಬಳಿಕ ಎಲ್ಲಿ ಸ್ಥಾಪಿಸಬೇಕು ಎಂಬುದನ್ನು ಸಂಸ್ಥೆಯೇ ನಿರ್ಧರಿಸಲಿದೆ. ಕರ್ನಾಟಕದಲ್ಲಿ ಇದು ಮೊಟ್ಟ ಮೊದಲ ಖಾಸಗಿ ವಿವಿಯಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X