ವರುಣ್ ವಿವಾದಾತ್ಮರ ಹೇಳಿಕೆ ನಕಲಿ ಅಲ್ಲ : ವರದಿ
ನವದೆಹಲಿ, ಜೂ. 21 : ಲೋಕಸಭೆ ಫಲಿತಾಂಶದ ನಂತರ ಜರ್ಜರಿತಗೊಂಡಿರುವ ಬೆನ್ನಲ್ಲೇ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದೆ. ಪಿಲಿಭೀತ್ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವರುಣ್ ಗಾಂಧಿ ಹೇಳಿಕೆ ನಕಲಿ ಅಲ್ಲ ಹಾಗೂ ಭಾಷಣವನ್ನು ತಿರುಚಿಲ್ಲ ಎಂದು ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ವರದಿ ನೀಡಿದ್ದಾರೆ.
ಹೈದರಾಬಾದ್ ನ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ತಮ್ಮ ವರದಿಯನ್ನು ಪಿಲಿಭೀತ್ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದಾರೆ. ಚುನಾವಣೆ ಪ್ರಚಾರದಲ್ಲಿ ಪಾಲ್ಗೊಂಡಿದ್ದ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಮಾಯಾವತಿ ನೇತೃತ್ವದ ಉತ್ತರ ಪ್ರದೇಶ ಸರಕಾರ ರಾಷ್ಟ್ರೀಯ ರಕ್ಷಣಾ ಕಾಯ್ದೆಯಡಿ ಅವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು.
ವರುಣ್ ಗಾಂಧಿ ಅವರು ಆರೋಪಿಸಿದಂತೆ ಭಾಷಣದ ಸಿಡಿಗಳು ನಕಲಿ ಅಲ್ಲ. ಅವುಗಳನ್ನು ತಿರುಚಲಾಗಿಲ್ಲ ಎಂದು ವಿಧಿ ವಿಜ್ಞಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ತಮ್ಮ ಹೇಳಿಕೆ ತೀವ್ರ ವಿವಾದ ಸೃಷ್ಟಿಸಿದ್ದರಿಂದ ವರುಣ್ ಗಾಂಧಿ, ನನ್ನ ಭಾಷಣದ ಸಿಡಿಗಳನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ವರುಣ್ ಗಾಂಧಿ ಪಿಲಿಭಿತ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿಯಿಂದ ಸಂಸತ್ತಿಗೆ ಆಯ್ಕೆಯಾಗಿದ್ದಾರೆ.
(ಏಜನ್ಸೀಸ್)
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications