ಜನಾಂಗೀಯ ಹಲ್ಲೆ : ವರದಿಗೆ ಸುಪ್ರಿಂಕೋರ್ಟ್ ತಾಕೀತು

ನವದೆಹಲಿ, ಜೂ, 22 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತಂತೆ ಪ್ರಮಾಣ ಪತ್ರ ಸಲ್ಲಿಸುವಂತೆ ಸುಪ್ರಿಂಕೋರ್ಟ್ ಕೇಂದ್ರ ಸರಕಾರಕ್ಕೆ ಸೂಚನೆ ನೀಡಿದೆ.

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಜನಾಂಗೀಯ ಹಲ್ಲೆ ತಡೆಯುವಲ್ಲಿ ಕೇಂದ್ರ ಸರಕಾರ ನಿರಾಸಕ್ತಿ ತೋರುತ್ತಿದೆ ಎಂದು ನ್ಯಾಯವಾದಿ ಡಿ ಕೆ ಗರ್ಗ್ ಅವರು ಸುಪ್ರಿಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ದಲ್ವೀರ್ ಸಿಂಗ್ ಮತ್ತು ಅಶೋಕ್ ಕುಮಾರ್ ಗಂಗೂಲಿ ಅವರನ್ನು ಒಳಗೊಂಡ ಪೀಠ, ಪ್ರಕರಣ ಬಗ್ಗೆ ಸರಕಾರ ತೆಗೆದುಕೊಂಡಿರುವ ಕ್ರಮಗಳ ಕುರಿತ ಸಮಗ್ರ ಪ್ರಮಾಣಪತ್ರವನ್ನು ಜೂನ್ 29 ರಂದು ನಡೆಯಲಿರುವ ವಿಚಾರಣೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚನೆ ನೀಡಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+