ದಿವಾಕರ ಬಾಬು ಕುಟುಂಬ ಕೊಲೆಗಡುಕ ಕುಟುಂಬ

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಗಣಿ ವಿವಾದಕ್ಕೆ ಸಂಬಂಧಿಸಿದಂತೆ ದಿವಾಕರ ಬಾಬು ಮಾಡಿರುವ ಉಪವಾಸ ಸತ್ಯಾಗ್ರಹ ಸಂಪೂರ್ಣ ರಾಜಕೀಯ ಪ್ರೇರಿತ ಎಂದರು. ದಿವಾಕರ್ ಬಾಬು ಅವರು ಕೊಲೆಗಡುಕ ರಾಜಕಾರಣಿ ಎನ್ನುವುದು ಅವರ ಇತಿಹಾಸವೇ ಹೇಳುತ್ತದೆ. ಗಣಿಗಾರಿಕೆಗೆ ಸಂಬಂಧಿಸಿದಂತೆ ಅವರು ಮಾಡುತ್ತಿರುವ ನಾಟಕ ರಾಜಕೀಯ ದುರುದ್ದೇಶ ಹೊಂದಿದೆ. ಬಳ್ಳಾರಿ ಗಣಿಗಾರಿಕೆಗೆ ಸಂಬಂಧಿಸಿದಂತೆ ಸರ್ವೆ ಕಾರ್ಯ ನಡೆಸು ನಾವು ಸಿದ್ಧ ಎಂದು ಅವರು ಸ್ಪಷ್ಟಪಡಿಸಿದರು.
ಬಳ್ಳಾರಿ ಸುತ್ತಮುತ್ತ ಜನಾರ್ದನರೆಡ್ಡಿ ಒಡೆತನ ಓಬಳಾಪುರಂ ಮೈನಿಂಗ್ ಕಂಪನಿ ನಡೆಸುತ್ತಿರುವ ಗಣಿಗಾರಿಕೆ ಸಂಪೂರ್ಣ ಕಾನೂನು ಉಲ್ಲಂಘನೆಯಾಗಿದೆ. ಅಲ್ಲದೇ ರಾಜ್ಯ ಗಡಿ ತಿರುಚಲಾಗಿದೆ. ಹಾಗೂ ರೆಡ್ಡಿ ಮೇಲಿರುವ ಎಲ್ಲ ಆರೋಪಗಳನ್ನು ಹಿಂಪಡೆಯಲು ಇತ್ತೀಚೆಗೆ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಇದನ್ನು ಖಂಡಿಸಿದ ದಿವಾಕರ ಬಾಬು ಬಳ್ಳಾರಿಯಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸಿ ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಪ್ರಶ್ನಿಸುವಂತಿಲ್ಲ. ಸರಕಾರದ ಆದೇಶ ಮೀರಿ ಉಪವಾಸ ಮುಂದುವರೆಸಿದರೆ ಅವರ ಕ್ರಿಮಿನಲ್ ಮೊಕದ್ದಮೆ ಹೂಡಿ ಬಂಧಿಸಲಾಗುವುದು ಎಂದು ಸರಕಾರ ಎಚ್ಚರಿಕೆ ನೀಡಿದ್ದರಿಂದ ಅವರು ಉಪವಾಸ ಸತ್ಯಾಗ್ರಹವನ್ನು ವಾಪಸ್ಸು ಪಡೆದುಕೊಂಡಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications