ಚಾಮರಾಜನಗರ:ಬಿ ಡಿ ಜತ್ತಿ ಕವನ ಸಂಕಲನ ಸ್ಪರ್ಧೆ
ಚಾಮರಾಜನಗರ, ಜೂ. 25 : ಬೈಲಹೊಂಗಲದ ಕನ್ನಡಶ್ರೀ ಪ್ರಕಾಶನವು ಮಾಜಿ ಹಂಗಾಮಿ ರಾಷ್ಟ್ರಪತಿ ಡಾ: ಬಿ.ಡಿ.ಜತ್ತಿ ಅವರ ಜಯಂತಿ ನಿಮಿತ್ತವಾಗಿ ರಾಜ್ಯ ಮಟ್ಟದ ಕವನ ಸಂಕಲನವನ್ನು ರೂಪಿಸಿ ಹೊರತರಲು ನಿರ್ಧರಿಸಿದೆ.
ಡಾ : ಬಿ.ಡಿ.ಜತ್ತಿ ಅವರ ಜೀವನ, ಸಾಧನೆ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಆಡಳಿತಾತ್ಮಕ, ವಚನ ಸಾಹಿತ್ಯಕ್ಕೆ, ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆಯ ಬಗ್ಗೆ ಉದಯೋನ್ಮುಖ ಹಾಗೂ ಪ್ರತಿಭಾವಂತ ಕವಿಗಳಿಂದ ಕವನಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕವನಗಳನ್ನು ಸಂಕಲನ ರೂಪದಲ್ಲಿ ಪ್ರಕಟಿಸಲಾಗುವುದು ಮತ್ತು ಬೆಳಗಾವಿ ನಗರದಲ್ಲಿ ರಾಜ್ಯ ಮಟ್ಟದ ಕವಿಗೋಷ್ಠಿ ಏರ್ಪಡಿಸಿ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಲಾಗುವುದು.
ಕವನ 30 ಸಾಲುಗಳಿಗೆ ಮಿಕ್ಕದಂತೆ ಕಾಗದದ ಒಂದೇ ಮಗ್ಗುಲಲ್ಲಿ ಬರೆದು ಅಥವಾ ಡಿ.ಟಿ.ಪಿ. ಮಾಡಿಸಿ, ಸ್ವವಿಳಾಸ, ಕಿರಿ ಪರಿಚಯ, ಭಾವಚಿತ್ರದೊಂದಿಗೆ 2009 ರ ಜುಲೈ 20ರೊಳಗೆ ಡಾ.ಪ್ರಕಾಶ ಗ.ಖಾಡೆ, ಪ್ಲಾಟ್ ನಂ.19, ಸೆಕ್ಟರ್ ನಂ.3, ಜಿಲ್ಲಾ ಆಸ್ಪತ್ರೆ ಹತ್ತಿರ, ನವನಗರ, ಬಾಗಲಕೋಟೆ-587103 ವಿಳಾಸಕ್ಕೆ ಕಳಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ 9845500891 ಸಂಪರ್ಕಿಸಬೇಕೆಂದು ಬೆಳಗಾವಿ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮೋಹನ ಬಸನಗೌಡ ಪಾಟೀಲ ತಿಳಿಸಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications