ಆಹಾರ ಭದ್ರತಾ ಕಾಯ್ದೆ ಜಾರಿ: ಸೋನಿಯಾ

ಬಡಕುಟುಂಬಗಳಿಗೆ ತಿಂಗಳಿಗೆ ಕೆಜಿಗೆ 3 ರುಪಾಯಿಯಂತೆ 35 ಕೆಜಿ ಆಹಾರ ಧಾನ್ಯವನ್ನು ವಿತರಿಸಲು ಕ್ರಮಕೈಗೊಳ್ಳುವಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ಸೋನಿಯಾ ಗಾಂಧಿ ಸೂಚಿಸಿದ್ದಾರೆ. ಚುನಾವಣೆ ಪ್ರಣಾಳಿಕೆಯಲ್ಲಿ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಸೋನಿಯಾ ನಿರ್ದೇಶಿಸಿದ್ದಾರೆ.
ಬಿಪಿಎಲ್ ಪಡಿತರದಾರರು ಸೇರಿದಂತೆ ಮಹಿಳೆಯರು, ಅಂಗವಿಕಲರು ಹಾಗೂ ಒಂಟಿಯಾಗಿ ಜೀವನ ನಡೆಸುತ್ತಿರುವ ವೃದ್ಧರಿಗೂ ಆಹಾರ ಭದ್ರತಾ ಕಾಯ್ದೆಯ ಪ್ರಯೋಜನವನ್ನು ವಿಸ್ತರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಹಾರ ಕಾಯ್ದೆ ಬಗ್ಗೆ ಕಾಂಗ್ರೆಸ್ ಜನರಿಗೆ ಭರವಸೆ ನೀಡಿತ್ತು.
(ಏಜನ್ಸೀಸ್)












Click it and Unblock the Notifications