ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಕೋ ಪ್ರಕರಣ ಸಿಓಡಿ ತನಿಖೆಗೆ : ಬಿದರಿ

By Staff
|
Google Oneindia Kannada News

Shankar bidari
ಬೆಂಗಳೂರು, ಜು. 3 : ಅನಿವಾಸಿ ಭಾರತೀಯರಿಗೆ ನಿವೇಶನ ಕೊಡಿಸುವುದಾಗಿ ನಂಬಿಸಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಕೇರಳದ ಜೋಸೆಫ್ ಚಾಕೋ ಪ್ರಕರಣವನ್ನು ಸಿಓಡಿ ತನಿಖೆಗೆ ವಹಿಸಿರುವುದಾಗಿ ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಕೋ ವಿರುದ್ಧ ವಂಚನೆ, ಅತಿಕ್ರಮಣ ಸೇರಿದಂತೆ 40ಕ್ಕೊ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಆರೋಪಿಯ ವಿಚಾರಣೆ ಸಂಬಂಧಪಟ್ಟಂತೆ ಗ್ರಾಮಾಂತರ ಮತ್ತು ನಗರ ಜಿಲ್ಲಾ ಪೊಲೀಸರ ನಡುವೆ ಭಿನ್ನಾಭಿಪ್ರಾಯವನ್ನು ತಡೆಯಲು ಇಜೀ ಪ್ರಕರಣವನ್ನು ಸಿಓಡಿಗೆ ವಹಿಸಿರುವುದಾಗಿ ತಿಳಿಸಿದರು.

ಈ ಪ್ರಕರಣದಿಂದ ಹಣ ಕಳೆದುಕೊಂಡವರಿಗೆ ಅನ್ಯಾಯವಾಗದಂತೆ ನ್ಯಾಯ ದೊರಕಿಸಿಕೊಡುವ ದೃಷ್ಟಿಯಿಂದ ಹಾಗೂ ಅನಗತ್ಯ ವಿಳಂಬ ತಡೆಯಲು ಪ್ರಕರಣವನ್ನು ಸಿಓಡಿಗೆ ವಹಿಸಲು ನಿರ್ಧರಿಸಲಾಯಿತು ಎಂದು ಬಿದರಿ ಹೇಳಿದರು. ಆರೋಪಿಯನ್ನು ಡೂನ್ 19 ರಂದು ಕೊಲ್ಕತ್ತಾದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆನಂತರ ವಿಚಾರಣೆಗಾಗಿ ಸಿಸಿಬಿ ಪೊಲೀಸ್ ವಶಕ್ಕೆ ನೀಡಲಾಗಿತ್ತು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X