ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚಾಮರಾಜನಗದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

By Staff
|
Google Oneindia Kannada News

ಚಾಮರಾಜನಗರ, ಜು. 3 : ಚಾಮರಾಜನಗರ ನಗರಸಭಾ ವ್ಯಾಪ್ತಿಯ 31 ವಾರ್ಡ್‌ಗಳಿಗೆ ಟಿ.ನರಸೀಪುರ ಪಂಪ್‌ಹೌಸ್‌ನಿಂದ ಕೊಳವೆ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಸಂಬಂಧ ದಿನದಲ್ಲಿ 16 ರಿಂದ 18 ಗಂಟೆ ನೀರು ಸರಬರಾಜು ಮಾಡಿದರೆ ಪಟ್ಟಣದ ಸಾರ್ವಜನಿಕರಿಗೆ ಸಮಸ್ಯೆ ಇಲ್ಲದ ರೀತಿಯಲ್ಲಿ ನೀರು ಸರಬರಾಜು ಮಾಡಬಹುದಾಗಿದ್ದು ವಿದ್ಯುತ್ ಸಮಸ್ಯೆಯಿಂದ ಮತ್ತು ನೀಡಿರುವ ವಿದ್ಯುತ್ ವೋಲ್ಟೇಜ್ ಸಮಸ್ಯೆಯಿಂದ ನೀರು ಸರಬರಾಜು ವ್ಯವಸ್ಥೆಯಲ್ಲಿ ಸಮಸ್ಯೆ ಉದ್ಭವವಾಗಿದ್ದು ಸಾರ್ವಜನಿಕರಿಂದ ಮತ್ತು ನಗರಸಭಾ ಸದಸ್ಯರಿಂದ ಸಾಕಷ್ಟು ದೂರುಗಳು ಬರುತ್ತಿದೆ.

ಆದ್ದರಿಂದ ಸದರಿ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಮುನ್ನ ಸಾರ್ವಜನಿಕ ಕುಡಿಯುವ ನೀರಿನ ಹಿತದೃಷ್ಟಿಯಿಂದ ಸಮರ್ಪಕವಾದ ವಿದ್ಯುತ್ ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಮತ್ತು ಸದರಿ ವಿಷಯವನ್ನು ಅತೀ ಜರೂರು ಎಂದು ಪರಿಗಣಿಸುವಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಚೆಸ್ಕ್, ಟಿ.ನರಸೀಪುರರವರಿಗೆ ಪತ್ರ ಬರೆಯಲಾಗಿರುತ್ತದೆ. ಆದ್ದರಿಂದ ಸಾರ್ವಜನಿಕರಿಗೆ ನಿಗದಿತ ಸಮಯಕ್ಕೆ ಪ್ರತಿ ನಿತ್ಯ ನೀರು ಬಿಡುವುದರಲ್ಲಿ ವ್ಯತ್ಯಾಸವಾಗಲಿದ್ದು, ನೀರು ಬರುವ ವೇಳೆ ನೀರನ್ನು ಶೇಖರಣೆ ಮಾಡಿಕೊಂಡು ಮಿತವಾಗಿ ಬಳಸಿ ನಗರಸಭೆಯ ಜೊತೆಯ ಸಹಕರಿಸುವಂತೆ ಪೌರಾಯುಕ್ತರು ಮನವಿ ಮಾಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X