ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಂಕ್ರಾಮಿಕ ರೋಗ : ಮನೆ ಮನೆ ಸಮೀಕ್ಷೆ ಆರಂಭ

By Staff
|
Google Oneindia Kannada News

ಮೈಸೂರು, ಜು. 7 : ಮೈಸೂರು ನಗರಪಾಲಿಕೆ, ಮೈಸೂರು ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಮೈಸೂರು ನಗರದ ವಿವಿಧ ಭಾಗಗಳಲ್ಲಿ ಹರಡುವ ಸಾಂಕ್ರಾಮಿಕ ರೋಗಗಳನ್ನು ಕುರಿತು ಮನೆ ಮನೆ ಸಮೀಕ್ಷೆ ಕಾರ್ಯಕ್ರಮ ಸೋಮವಾರ ಆರಂಭಗೊಂಡಿತು.

ಮೈಸೂರು ಜೆ ಎಲ್ ಬಿ ರಸ್ತೆಯಲ್ಲಿರುವ ತುಳಸೀದಾಸ್ ಆಸ್ಪತ್ರೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ವಿ ರಾಜು ಅವರು ಸಮೀಕ್ಷೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಈವರೆಗೆ ನಗರದಲ್ಲಿ 11 ಚಿಕುನ್ ಗುನ್ಯಾ, 12 ಮಲೇರಿಯಾ ಮತ್ತು ಒಂಬತ್ತು ಡೆಂಗ್ಯೂ ಜ್ವರದ ದೂರು ದಾಖಲಾಗಿದೆ. ಈ ಸಮೀಕ್ಷೆಯು ಜನರಲ್ಲಿ ಸಾಂಕ್ರಾಮಿಕ ರೋಗಗಳನ್ನು ಎಚ್ಚರಿಸಲು ನೆರವಾಗಲಿದೆ ಎಂದು ಹೇಳಿದರು.

ಆರು ದಿನ ನಡೆಯುವ ಈ ಕಾರ್ಯಕ್ರಮದಲ್ಲಿ 168 ತಂಡಗಳು ಪಾಲ್ಗೊಳ್ಳಲಿವೆ. ಒಟ್ಟಾರೆ 25 ವೈದ್ಯರು ತಂಡದಲ್ಲಿದ್ದು ಮಾರ್ಗದರ್ಶನ ನೀಡಲಿದ್ದಾರೆ. ದಿನನಿತ್ಯ ಸುಮಾರು 150 ಮನೆಗಳನ್ನು ಪ್ರತೀ ತಂಡ ಸಂದರ್ಶಿಸಲಿದೆ. ಸಂದರ್ಶನದ ವೇಳೆ ರಕ್ತ ಲೇಪನ ಪಡೆಯಲಿದೆ. ಮೊಟ್ಟೆಗಳ ಉತ್ಪತ್ತಿಗೆ ಕಾರಣವಾಗುವ ಸ್ಥಳಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಮೂಲಕ ರೋಗಗಳನ್ನು ಹತೋಟಿ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X