ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ

By Staff
|
Google Oneindia Kannada News

 HC pulls up govt over language policy
ಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ.

ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ ಕುರಿತು ಸರಕಾರವನ್ನು ತರಾಟೆಗೆ ತೆಗೆದುಕೊಂಡು, ಸುಪ್ರಿಂಕೋರ್ಟ್ ಮೊರೆ ಹೋಗಲು ಜುಲೈ 12 ರ ವರೆಗೆ ಕಾಲಾವಕಾಶ ನೀಡಿದ್ದು, ಅಷ್ಟರೊಳಗೆ ಸುಪ್ರಿಂಕೋರ್ಟ್ ನಲ್ಲಿ ತಡೆಯಾಜ್ಞೆ ಸಿಗದಿದ್ದರೆ ಸರಕಾರದ ಮುಖ್ಯಕಾರ್ಯದರ್ಶಿಗಳು ನ್ಯಾಯಪೀಠದ ಮುಂದೆ ಖುದ್ದು ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಿತು.

2008ರ ಜುಲೈ 2 ರಂದು ಹೈಕೋರ್ಟ್ ಪೂರ್ಣ ಪೀಠ ಸರಕಾರದ ಮಾಧ್ಯಮ ನೀತಿಯನ್ನು ಅನೂರ್ಜಿತಗೊಳಿಸಿ ವಿದ್ಯಾರ್ಥಿಗಳ ಹಾಗೂ ಪೋಷಕರು ಇಚ್ಚಿಸುವ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲು ಅವಕಾಶ ನೀಡಿತ್ತು, ಆದರೆ, ಈ ಆದೇಶದ ವಿರುದ್ಧ ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದು, ಜುಲೈ 21 ರಂದು ಅದರ ವಿಚಾರಣೆ ನಡೆಯಲಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X