ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಲೂರಿನಲ್ಲಿ ಲೋಕಾಯುಕ್ತರಿಂದ ಅರ್ಜಿ ಸ್ವೀಕಾರ

By Staff
|
Google Oneindia Kannada News

ಕೋಲಾರ, ಜುಲೈ 9: ಜುಲೈ 13 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಮಾಲೂರಿನ ಪ್ರವಾಸಿ ಮಂದಿರ ದಲ್ಲಿ ಸಾರ್ವಜನಿಕರ ಅರ್ಜಿ/ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಂಡಿರುತ್ತಾರೆ. ಮಾಲೂರು ಟೌನ್ ಮತ್ತು ತಾಲ್ಲೂಕಿನ ಸುತ್ತಮುತ್ತ ಹಳ್ಳಿಗಳ ಸಾರ್ವಜನಿಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದೆಂದು ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಅಲೆಮಾರಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ :2009-10ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯ ಮಾಧ್ಯಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿಭಾವಂತ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಪ್ರತಿಷ್ಠಿತ ಶಾಲೆಗಳಲ್ಲಿ ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳು ದಾಖಲಾಗಿರುವ ಬಗ್ಗೆ ಸಂಸ್ಥೆಯವರು ಮಾಹಿತಿಯನ್ನು ಹಾಗೂ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳ ಪಟ್ಟಿಯನ್ನು ಜುಲೈ 20 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೋಲಾರ ಜಿಲ್ಲೆ, ಕೋಲಾರ ರವರ ಕಛೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 08152-222336 ಸಂಪರ್ಕಿಸಲು ಕೋರಿದೆ.

ಸಹ ಶಿಕ್ಷಕರ ಹುದ್ದೆಗೆ ಅರ್ಜಿ ವಿತರಣೆ :ಪ್ರಸಕ್ತಿ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಹ ಶಿಕ್ಷಕ, ಶಿಕ್ಷಕಿ ವೃಂದದ ಹುದ್ದೆಗಳನ್ನು ನೇರ ನೇಮಕಾತಿಯ ಸಂಯುಕ್ತ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡುವ ಸಲುವಾಗಿ ಜುಲೈ 9 ರಿಂದ ಆಗಸ್ಟ್ 10 ರವರೆಗೆ ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೋಲಾರ, ಇಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿಯ ಶುಲ್ಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲರ ಅಭ್ಯರ್ಥಿಗಳಿಗೆ ರೂ.150 ಉಳಿದಂತೆ ಎಲ್ಲಾ ಅಭ್ಯರ್ಥಿಗಳಿಗೆ ರೂ.300 ಗಳ ಚಲನ್ ಅನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಕೋಲಾರ ಶಾಖೆಯಲ್ಲಿ ಪಾವತಿಸಿ ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೋಲಾರ ಇಲ್ಲಿ ಅರ್ಜಿ ನಮೂನೆಗಳನ್ನು ಸ್ವೀಕರಿಸಬಹುದು.

(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X