36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg233589sessionನಾಳೆಯಿಂದ ಮೂರು ದಿನ ಅಧಿವೇಶನ/news/2009/07/08/karnataka-budget-session-set-to-be-stormy.htmlಬೆಂಗಳೂರು, ಜು. 8 : ಗುರುವಾರದಿಂದ ಮೂರು ದಿನಗಳ ಕಾಲ ಉಭಯ ಸದನದಲ್ಲಿ ಅಧಿವೇಶನ ಆರಂಭವಾಗಲಿದೆ. ರಾಜ್ಯ ಸರಕಾರದ ಆಡಳಿತದ ಕಾರ್ಯವೈಖರಿ, ವಿದ್ಯುತ್ ಸಮಸ್ಯೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಕತ್ತಿ ಝಳಪಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲ ಮೇಲೆ ನಿಂತಿವೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬಿಜೆಪಿ, ಫಲಿತಾಂಶದ 37859http://kannada.oneindia.com/img/2009/07/08-siddaramaiah2.jpg233589sessionಅಧಿವೇಶನಗುಳುಂ ಮಾಡಿದ ಕ್ಯಾತಮಾರನಹಳ್ಳಿ /news/2009/07/09/yeddyurappa-promises-grand-mysuru-dasara.htmlಬೆಂಗಳೂರು, ಜು. 9 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋಮುಗಲಭೆಯಂತಹ ಘಟನೆಗಳು ನಡೆದಿರುವುದು ತಮಗೆ ತೀವ್ರ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷಾಧಿಸಿದರು. (ಗುರುವಾರ ಬೆಳಗ್ಗೆ ಯಡಿಯೂರಪ್ಪ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಸಂಜೆ ವೇಳೆಗೆ ಮತ್ತೆ ಮೈಸೂರು ಬೆಂಕಿಚಂಡಾಗಿ ಹೊತ್ತಿ ಉರಿಯತೊಡಗಿದೆ). ಅಧಿವೇಶನಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು 37894http://kannada.oneindia.com/img/2009/07/09-siddaramaiah2.jpg233589sessionಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg233589sessionಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg233589sessionಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ? | Yeddyurappa | Session | BJP | Kyatamarahalli | Siddaramaiah | VS Ugrappa | JDS | ಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ? - Kannada Oneindia

ಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?

ಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.

ಇದಕ್ಕೆ ಧ್ವನಿಗೂಡಿಸಿದ ಸದಸ್ಯ ಎ ಎಂ ಹಿಂಡಸಗೇರಿ ನಾಲ್ಕು ತಿಂಗಳಿಂದ ಮೈಸೂರಿನಲ್ಲಿ ಗಲಭೆಗಳು ನಡೆಯುತ್ತಿವೆ ಎಂದು ಆರೋಪಿಸಿದರು. 5 ಮಂದಿ ಈಗಾಗಲೇ ಮೃತಪಟ್ಟಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರು ತಲ್ಲಣಗೊಂಡಿದೆ. ಅಲ್ಲಿ ಶಾಂತಿ ನೆಲಸಬೇಕು. ಜಾತಿಗಳ ಸಂಘರ್ಷ ತಪ್ಪಿಸಬೇಕು. ಆರೋಪ ಪ್ರತ್ಯಾರೋಪ ನಿಲ್ಲಿಸಿ ಪಕ್ಷಾತೀತವಾಗಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಜೆಡಿಎಸ್ ಮುಖಂಡ ಎಂ ಸಿ ನಾಣಯ್ಯ ಹೇಳಿದರು.

ಪ್ರತಿಪಕ್ಷಗಳು ಹಿಡಿದ ಬಿಗಿಪಟ್ಟಿಗೆ ಕೋಪಗೊಂಡ ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯೆ ಪ್ರವೇಶಿಸಿ, ಮೈಸೂರು ಗಲಭೆ ವ್ಯವಸ್ಥಿತ ಸಂಚು. ಬೇರೆ ಬೇರೆ ರಾಜ್ಯಗಳಿಂದ ಮೈಸೂರಿಗೆ ಬಂದು ಗಲಭೆ ಸೃಷ್ಟಿಸುತ್ತಿರುವ ಬಗ್ಗೆ ಸರಕಾರಕ್ಕೆ ಮಾಹಿತಿ ಲಭ್ಯವಾಗಿದೆ. ಅಲ್ಲಿನ ಹಿರಿಯ ಅಧಿಕಾರಿಗಳ ಗಾಯಗೊಂಡಿದ್ದಾರೆ ಎಂದರು. ಶಾಂತಿ ನೆಲೆಸುವ ಸಲುವಾಗಿ ಸರಕಾರ ಎಲ್ಲ ಪ್ರಯತ್ನ ನಡೆಸುತ್ತಿದೆ. ಅದಕ್ಕೆ ಪ್ರತಿಪಕ್ಷಗಳ ಸಹಕಾರವೂ ಬೇಕು ಎಂದು ಮನವಿ ಮಾಡಿಕೊಂಡರು.

ಜೆಡಿಎಸ್ ಸಭಾತ್ಯಾಗ

ಗುಲ್ಬರ್ಗಾ ಹಾಲು ಒಕ್ಕೂಟದ ಆಡಳಿತ ಮಂಡಳಿಯನ್ನು ಸೂಪರ್ ಸೀಡ್ ಮಾಡಿರುವುದನ್ನು ಖಂಡಿಸಿ ಜೆಡಿಎಸ್ ವಿಧಾನಸಭೆಯಲ್ಲಿಂದು ಸಭಾತ್ಯಾಗ ಮಾಡಿತು. ರಾಜಕೀಯ ದುರುದ್ದೇಶದಿಂದ ಹೊರಡಿಸಿರುವ ಗುಲ್ಬರ್ಗಾ ಹಾಲು ಒಕ್ಕೂಟದ 9 ಮಂದಿ ಆಡಳಿತ ಸದಸ್ಯರನ್ನು ಅನರ್ಹಗೊಳಿಸಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಸಭಾಧ್ಯಕ್ಷರ ಮುಂದಿನ ಬಾವಿಗೆ ತೆರಳಿ ಜೆಡಿಎಸ್ ಸದಸ್ಯರು ಕೆಲ ಕಾಲ ಧರಣಿ ನಡೆಸಿದರು. ಸರಕಾರ ಮತ್ತು ಜೆಡಿಎಸ್ ನಡುವೆ ವಾದ ವಿವಾದ ನಡೆದಾಗ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮೂರು ಬಾರಿ ಮಧ್ಯೆ ಪ್ರವೇಶಿಸಿ ಸಲಹೆ ನೀಡಿದರೂ ಪ್ರಯೋಜನವಾಗಲಿಲ್ಲ.

ನಿಗದಿತ ಸಮಯಕ್ಕೆ ಬನ್ನಿ

ನಿಗದಿತ ಸಮಯಕ್ಕೆ ಸದನಕ್ಕೆ ಹಾಜರಾಗುವಂತೆ ಸದಸ್ಯರಿಗೆ ವಿಧಾನಸಭೆ ಸ್ಪೀಕರ್ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಸೂಚನೆ ನೀಡಿದರು. ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ ಬಹುತೇಕ ಸದಸ್ಯರ ಹಾಜರಾತಿ ಕೊರತೆ ಗಮನಿಸಿ ಈ ಸೂಚನೆ ನೀಡಿದರು. ಬೆಳಗ್ಗೆ 10.30ಕ್ಕೆ ಸದನ ಸಮಾವೇಶಗೊಳ್ಳಬೇಕಿತ್ತಾದರೂ ಸದಸ್ಯರು ತಡವಾಗಿ ಆಗಮಿಸಿದ್ದರಿಂದ ಸದನವನ್ನು ವಿಳಂಬವಾಗಿ ಆರಂಭಿಸಬೇಕಿದೆ ಎಂದು ಶೆಟ್ಟರ್ ವಿವರಿಸಿದರು.

ನೇಮಕಾತಿ ನಿಯಮಾವಳಿಗೆ ತಿದ್ದುಪಡಿ : ಕಾಗೇರಿ

ನೇಮಕಾತಿ ನಿಯಮಾವಳಿಗೆ ಸರಕಾರ ಶೀಘ್ರದಲ್ಲೇ ಎಲ್ಲ ಶಿಕ್ಷಕರ ಅನ್ವಯವಾಗುವಂತೆ ತಿದ್ದುಪಡಿ ಮಾಡಲು ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗ್ಡೆ ಕಾಗೇರಿ ವಿಧಾನ ಪರಿಷತ್ ನಲ್ಲಿಂದು ತಿಳಿಸಿದರು. ಈಗಾಗಲೇ ನೇಮಕಾತಿ ನಿಯಮಾವಳಿಗೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿಯು ಪರಿಶೀಲನೆ ಆರಂಭಿಸಿದ್ದು, ಕಾನೂನು ಇಲಾಖೆ, ಆಡಳಿತ ಹಾಗೂ ಸಿಬ್ಬಂದಿ ಸುಧಾರಣೆ ಇಲಾಖೆಯ ಅಭಿಪ್ರಾಯವನ್ನು ಪಡೆಯಲಾಗಿದೆ. ಇದರ ಪ್ರಸ್ತಾವನೆಯನ್ನು ಮುಖ್ಯಕಾರ್ಯದರ್ಶಿಗಳ, ಅಪರ ಕಾರ್ಯದರ್ಶಿಯವರ ಪರಿಶೀಲನೆಗೆ ಮಂಡಿಸಿದ್ದು, ಒಪ್ಪಿಗೆ ಪಡೆದ ನಂತರ ಸರಕಾರ ತಕ್ಷಣವೇ ತಿದ್ದುಪಡಿ ಮಾಡಲು ಸಿದ್ಧವಿದೆ ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+