ತುಂಬಿ ತುಳುಕುತ್ತಿರುವ ತುಂಗಾ ನದಿಗೆ ಈಶ್ವರಪ್ಪ ಬಾಗಿನ

ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಜೊತೆಗೆ ಚರ್ಚೆ ನಡೆಸಿದ್ದು, ರಾಜ್ಯದ ಕೈಗಾರಿಕೆಗಳಿಗೆ ಹಗಲು-ರಾತ್ರಿ ವಿದ್ಯುತ್ ಒದಗಿಸಲು ಚರ್ಚೆ ನಡೆಯುತ್ತಿದೆ. ಕೈಗಾರಿಕೆಗಳಲ್ಲಿ ರಾತ್ರಿ ಪಾಳಿ ಕೆಲಸ ನಡೆದರೆ ಅನುಕೂಲವಾಗುತ್ತದೆ. ಈ ವಾರದಲ್ಲಿ ವಿದ್ಯುತ್ ಇಲಾಖೆ, ಕೈಗಾರಿಕಾ ಇಲಾಖೆ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿ, ನಂತರ ತೀರ್ಮಾನಿಸುವುದಾಗಿ ತಿಳಿಸಿದರು.
ಕಳೆದ ಆರು ವರ್ಷಗಳಿಂದ ವಿದ್ಯುತ್ ದರದಲ್ಲಿ ಹೆಚ್ಚಳವಾಗಿಲ್ಲ. ಹೀಗಾಗಿ ವಿದ್ಯುತ್ ದರ ಏರಿಕೆಯಾಗುವ ಸಂಭವವಿದ್ದು, ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆದು ಶೇ.20ರಷ್ಟು ಬೆಲೆ ಏರಿಸುವಂತೆ ಕೆ.ಇ.ಆರ್.ಸಿ.ಗೆ ಮನವಿ ಸಲ್ಲಿಸಲಾಗುವುದು. ರಾಜ್ಯದಲ್ಲಿ 8 ದಿನಗಳ ಹಿಂದೆ ಬರಗಾಲದ ಛಾಯೆ ಇತ್ತು. ರಾಜ್ಯದ ಜನರ ಆಶೀರ್ವಾದ ಹಾಗೂ ದೇವರ ಕೃಪೆಯಿಂದ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಇದರಿಂದಾಗಿ ರೈತರಿಗೂ ಅನುಕೂಲವಾಗಿದೆ. ವಿಶೇಷವಾಗಿ ಲಿಂಗನಮಕ್ಕಿ ಜಲಾಶಯ 1771 ಅಡಿ ತುಂಬಿದ್ದು, ಕಳೆದ ಹತ್ತು ದಿನಗಳಲ್ಲಿ ಶೇ.28ರಷ್ಟು ತುಂಬಿದೆ ಮತ್ತು ಕಳೆದ ವರ್ಷಕ್ಕಿಂತ 10 ಅಡಿ ಜಾಸ್ತಿ ನೀರು ಅಣೆಕಟ್ಟಿನಲ್ಲಿ ತುಂಬಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ರೈತರ ಐ.ಪಿ.ಪಂಪ್‌ಸೆಟ್‌ಗಳಿಗೆ ಒದಗಿಸುತ್ತಿದ್ದ ವಿದ್ಯುತ್ ಮೊದಲಿನಷ್ಟು ಅವಶ್ಯಕತೆ ಇಲ್ಲ. ಹೀಗಾಗಿ ಸಾಕಷ್ಟು ವಿದ್ಯುತ್ ಕೊಡುವಲ್ಲಿ ಯಶಸ್ವಿಯಾಗಿದ್ದೇವೆ. ಹವಾಮಾನ ಇಲಾಖೆ ವರದಿ ಮಾಡಿದಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ. ಮಳೆ ಚೆನ್ನಾಗಿ ಬಂದರೆ ವಿದ್ಯುತ್ ಸಮಸ್ಯೆ ಇಲ್ಲದಂತಾಗಬಹುದೆಂದು ಅಭಿಪ್ರಾಯಪಟ್ಟರು.
ನಿನ್ನೆ ಉತ್ತರಕನ್ನಡದ ತದಡಿ ಉಷ್ಣ ವಿದ್ಯುತ್ ಸ್ಥಾವರದ ಬಗ್ಗೆ ವಿಶೇಷ ಸಭೆ ನಡೆಸಲಾಗಿದೆ. ಮಾಧ್ಯಮಗಳಲ್ಲಿ ವರದಿಯದಂತೆ ಸ್ಥಾವರ ಸ್ಥಾಪಿಸಲು ಯಾವುದೇ ವಿರೋಧ ಇಲ್ಲ. ಇದೊಂದು ಸುಳ್ಳು ಸುದ್ದಿ ಎಂದರು. ತದಡಿ ಯೋಜನೆಯಿಂದ 4000 ಮೆ.ವ್ಯಾ. ವಿದ್ಯುತ್ ಉತ್ಪಾದಿಸುವ ಗುರಿ ಹೊಂದಿದ್ದು, ಕೇಂದ್ರ ಸರ್ಕಾರ ಯೋಜನೆಗಾಗಿ 20ಸಾವಿರ ಕೋಟಿ ನೀಡುವುದಾಗಿ ಭರವಸೆ ಕೊಟ್ಟಿದೆ. ಹಾಗೆಯೇ ಗುಂಡ್ಯಾ ಪ್ರಾಜೆಕ್ಟ್ ಸ್ಥಾಪನೆಯನ್ನು ಕೇಂದ್ರ ಸರ್ಕಾರದಿಂದ ಅನುಮತಿ ದೊರಕಿದೆ. ಶಿವನಸಮುದ್ರ ವಿದ್ಯುತ್ ಸ್ಥಾವರದ ಬಗ್ಗೆ ಕೇಂದ್ರ ಸರ್ಕಾರದ ಜೊತೆ ಉನ್ನತ ಮಟ್ಟದ ಚರ್ಚೆ ನಡೆಯುತ್ತಿರುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ರೈತರಿಗೆ 10 ಎಚ್.ಪಿ. ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಕೊಡುತ್ತಿದ್ದೇವೆ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಜ್ಯೋತಿ ಯೋಜನೆ ಜಾರಿಗೆ ತರಲು ಯೋಚಿಸುತ್ತಿರುವುದಾಗಿ ರಾಜ್ಯಕ್ಕೆ ವಿದ್ಯುತ್ ಒದಗಿಸುತ್ತಿರುವ ಪ್ರಮುಖ ಜಿಲ್ಲೆಗಳಾದ ಉತ್ತರ ಕನ್ನಡ, ರಾಯಚೂರು, ಶಿವಮೊಗ್ಗ, ಬಳ್ಳಾರಿ ಜಿಲ್ಲೆಗಳಿಗೆ ಆದ್ಯತೆ ಮೇಲೆ 24 ಗಂಟೆ ನಿರಂತರ ವಿದ್ಯುತ್ ಸಂಪರ್ಕ ಒದಗಿಸಲು ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತಿರುವುದಾಗಿ ಹೇಳಿದರು.
ಮೂರು ತಿಂಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಸೋಲಾರ್ ವಿದ್ಯುತ್ ಬಳಸುವಂತೆ ಜಾರಿಗೆ ತರಲಾಗುವುದು. ನಂತರ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಸೋಲಾರ್ ವಿದ್ಯುತ್ ಬಳಸುವಂತೆ ಕಾನೂನು ಜಾರಿ ಮಾಡುವುದಾಗಿ ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಸೂಡಾ ಅಧ್ಯಕ್ಷ ಜ್ಞಾನೇಶ್ವರ್, ಜಯಲಕ್ಷ್ಮೀಈಶ್ವರಪ್ಪ, ಗಿರೀಶ್ ಪಟೇಲ್, ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಪದ್ಮನಾಭ್ ಭಟ್, ದತ್ತಾತ್ರಿ ಸೇರಿದಂತೆ ಹಲವರು ಬಾಗಿನ ಸಲ್ಲಿಸುವಾಗ ಉಪಸ್ಥಿತರಿದ್ದರು.
ಚಿತ್ರ: ಕೆ.ಆರ್.ಸೋಮನಾಥ್
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications