ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಲೆ ಮಹದೇಶ್ವರ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರ

By Staff
|
Google Oneindia Kannada News

Rs 151 crore project for Malai Mahadeshwara temple
ಬೆಂಗಳೂರು, ಜು.11: ಮಲೆ ಮಹದೇಶ್ವರ ದೇವಾಲಯ ಹಾಗೂ ಪರಿಸರದ ಅಭಿವೃದ್ಧಿಗೆ ಪ್ರತ್ಯೇಕ ಪ್ರಾಧಿಕಾರವನ್ನು ರಚಿಸುವ ಪ್ರಸ್ತಾಪ ಸರ್ಕಾರದ ಮುಂದಿದೆ. ಜನಪ್ರತಿನಿಧಿಗಳ ಸಭೆ ಕರೆದು ಸಲಹೆ ಪಡೆದು ಪ್ರಾಧಿಕಾರದ ರೂಪರೇಷೆಗಳನ್ನು ರೂಪಿಸಲಾಗುವುದು ಎಂದು ವಸತಿ ಮತ್ತು ಮುಜರಾಯಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದರು.

ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಎಸ್. ಮಂಜುನಾಥ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಸಚಿವರು ಯಾತ್ರಾರ್ಥಿಗಳಿಗೆ ಹೆಚ್ಚಿನ ವಸತಿ ಸೌಕರ್ಯ ಒದಗಿಸಲು ವಸತಿ ಸಂಕೀರ್ಣ ಹಾಗೂ ಡಾರ್ಮೆಟರಿಗಳನ್ನು ನಿರ್ಮಾಣ ಮಾಡಲು ಮತ್ತು ಕಾವೇರಿ ನದಿಯಿಂದ ಮಹದೇಶ್ವರ ಬೆಟ್ಟಕ್ಕೆ ಕುಡಿಯುವ ನೀರನ್ನು ಒದಗಿಸುವ ಯೋಜನೆಯನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸದನದಲ್ಲಿ ಹಾಜರಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಲೈ ಮಹದೇಶ್ವರ, ಕುಕ್ಕೆ ಸುಬ್ರಹ್ಮಣ್ಯ, ನಂಜನಗೂಡು ಹಾಗೂ ಇನ್ನಿತರ ದೊಡ್ಡ ದೇವಾಲಯಗಳಿಗೆ ಬರುವ ಯಾತ್ರಾರ್ಥಿಗಳಿಗೆ ಆದ್ಯತೆ ಮೇರೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡುವುದಾಗಿ ಸದನಕ್ಕೆ ಆಶ್ವಾಸನೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X