ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಫೀಜ್ ಮೇಲ್ಮನವಿ ವಾಪಸ್ಸು ಪಡೆದ ಪಾಕ್

By Staff
|
Google Oneindia Kannada News

Hafeez Saeed
ಇಸ್ಲಾಮಾಬಾದ್, ಜು. 14 : ಕಳೆದ ವರ್ಷ ಮುಂಬೈನಲ್ಲಿ ನಡೆದ ಭೀಕರ ಭಯೋತ್ಪಾದನೆಯ ಪ್ರಮುಖ ರೂವಾರಿ ಲಷ್ಕರ್ ತೊಯ್ಬಾ ಹಾಗೂ ಜಮಾತೆ ಉದ್ ದವಾ ಸಂಘಟನೆಯ ಮುಖ್ಯಸ್ಥ ಹಫೀಜ್ ಮೊಹ್ಮದ್ ಸಯೀದ್ ವಿರುದ್ಧ ಪಾಕಿಸ್ತಾನದ ಪಂಜಾಬ ಸರ್ಕಾರ ಸುಪ್ರಿಂಕೋರ್ಟ್ ಗೆ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂದಕ್ಕೆ ಪಡೆದುಕೊಂಡಿದೆ. ಈ ಮೂಲಕ ಪಾಕ್ ಭಯೋತ್ಪಾದಕರನ್ನು ಬೆಂಬಲಿಸಿ ಪೋಷಿಸುತ್ತಿರುವುದು ಮತ್ತೊಮ್ಮೆ ಬಹಿರಂಗಗೊಂಡಂತಾಗಿದೆ.

ಕೆಳನ್ಯಾಯಾಲಯವು ಉಗ್ರ ಹಫೀಜ್ ಮೊಹ್ಮದ್ ಸಯೀದ್ ನನ್ನು ಬಿಡುಗಡೆಗೊಳಿಸಿ ಆದೇಶ ಹೊರಡಿಸಿರುವುದನ್ನು ಪ್ರಶ್ನಿಸಿ ಪಾಕಿಸ್ತಾನದ ಪಂಜಾಬ ಸರಕಾರ ಮೇಲ್ಮನವಿ ಸಲ್ಲಿಸಿತ್ತು. ಆದರೆ, ಇದೀಗ ಹಫೀಜ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯ ನೆಪವೊಡ್ಡಿ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ಸು ಪಡೆದುಕೊಂಡಿದೆ.

ಪಾಕ್ ಸುಪ್ರಿಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ಇಫ್ತೀಕಾರ್ ಚೌಧರಿ ನೇತೃತ್ವದ ಮೂವರನ್ನು ಒಳಗೊಂಡ ಪೀಠಕ್ಕೆ ಪಂಜಾದ ಸರಕಾರದ ವಕೀಲ ಜನರಲ್ ಮೊಹ್ಮದ್ ರಾಜಾ ಫಾರೂಕ್ ಅವರು ಹಫೀಜ್ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಕೈಬಿಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ಮುಂಬೈನ ಭಯೋತ್ಪಾದನೆ ನಂತರ ಉಗ್ರನನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಸಾಕ್ಷ್ಯಾಧಾರಗಳ ಕೊರತೆಯಿಂದ ಅವರು ಕೆಳ ನ್ಯಾಯಾಲಯದಿಂದ ಬಿಡುಗಡೆ ಹೊಂದಿದ್ದರು.

ಈಜಿಪ್ತ್ ನಲ್ಲಿ ಜಿ 8 ಶೃಂಗಸಭೆಯಲ್ಲಿ ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ಪಾಕಿಸ್ತಾನದ ಪ್ರಧಾನಿ ಯೂಸೆಫ್ ರಾಜಾ ಗಿಲಾನಿ ಭೇಟಿ ಮಾಡಿ ಉಗ್ರರ ದಮನ ಕುರಿತು ಮಾತುಕತೆ ನಡೆಸುತ್ತಿದ್ದರೆ, ಇನ್ನೊಂದು ಕಡೆಗೆ ಪಾಕ್ ಪ್ರಾಂತೀಯ ಸರಕಾರವೊಂದು ಉಗ್ರನ ವಿರುದ್ಧ ಸಲ್ಲಿಸಿದ್ದ ಮೇಲ್ಮನವಿಯನ್ನು ಹಿಂದಕ್ಕೆ ಪಡೆದುಕೊಂಡು ದ್ವಂದ್ವ ನೀತಿಯನ್ನು ಅನುಸರಿಸುತ್ತಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X