ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರೀ ಮಳೆಗೆ ತುಂಬಿ ಹರಿಯುತ್ತಿರುವ ತುಂಗಾ

By * ಕೆ.ಆರ್.ಸೋಮನಾಥ್, ಶಿವಮೊಗ್ಗ
|
Google Oneindia Kannada News

Tunga river flowing above danger mark
ಶಿವಮೊಗ್ಗ, ಜು. 15 : ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಎಲ್ಲಾ ಪ್ರಮುಖ ನದಿಗಳು ಅಪಾಯ ಮಟ್ಟದಲ್ಲಿ ಹರಿಯುತ್ತಿರುವ ದೃಶ್ಯ ಕಂಡುಬರುತ್ತಿದೆ.

ನಗರದಲ್ಲಿ ಹರಿಯುವ ತುಂಗಾ ನದಿಯು ತುಂಬಿ ಹರಿಯುತ್ತಿದ್ದು, ಅಪಾಯ ಮಟ್ಟ ತಲುಪಿದೆ. ಮಳೆಯ ಪ್ರಮಾಣ ಅಧಿಕವಾಗಿರುವುದರಿಂದ ಬುಧವಾರ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ತುಂಗಾ ಹಳೆಸೇತುವೆಯ ಬಳಿ ಮಂಟಪ ಮುಳುಗುವ ಹಂತಕ್ಕೆ ಬಂದಿದೆ. ಸಾರ್ವಜನಿಕರಿಗೆ, ಉದ್ಯೋಗಿಗಳಿಗೆ ತಮ್ಮ ದಿನನಿತ್ಯದ ಕೆಲಸ ಕಾರ್ಯಗಳಿಗೆ ಹೋಗಲು ಹರಸಾಹಸ ಪಡಬೇಕಾಗಿರುವುದು ಸಾಮಾನ್ಯವಾಗಿದೆ.

ನದಿ ಪಾತ್ರದಲ್ಲಿ ವಾಸಿಸುತ್ತಿರುವವರಿಗೆ ಹೆಚ್ಚಿನ ಸಮಸ್ಯೆ ಉಂಟಾಗುತ್ತಿದ್ದು, ಮಳೆ ಇದೆ ರೀತಿ ಮುಂದುವರೆದರೆ ಅಲ್ಲಿಂದ ಸ್ಥಳಾಂತರಗೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ನಗರದ ಇಮಾಮ್ ಬಾಡ, ಕುಂಬಾರಿ ಗುಂಡಿಗಳಂತಹ ತಗ್ಗು ಪ್ರದೇಶಕ್ಕೆ ನೀರು ನುಗ್ಗಿ ಆವಾಂತರ ಸೃಷ್ಟಿಸಿವೆ.

ಇಂದು ಸಹ ಮಳೆ ಮುಂದುವರೆದಿದ್ದು, ಜನಜೀವನ ಇನ್ನಷ್ಟು ಅಸ್ತವ್ಯಸ್ಥಗೊಳ್ಳುವ ಸಾಧ್ಯತೆ ಕಂಡುಬಂದಿದೆ. ತುಂಗಾ ನದಿಯ ಜಲಾನಯನ ಪ್ರದೇಶದಲ್ಲಿಯೂ ಹೇರಳ ಮಳೆಯಾಗುತ್ತಿದ್ದು, ಮಂಡಗದ್ದೆ ಜೊತೆಗೆ ಅಲ್ಲಿರುವ ಪಕ್ಷಿಧಾಮ ಸೇರಿದಂತೆ ಹಲವು ಊರುಗಳು ಜಲಾವೃತವಾಗುವ ಸಂಭವವಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X