ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಡ್ ಶೆಡ್ಡಿಂಗ್ ರದ್ದು : ಈಶ್ವರಪ್ಪ

By Staff
|
Google Oneindia Kannada News

ಬೆಂಗಳೂರು, ಜು. 17 : ನಗರ ಪ್ರದೇಶದಲ್ಲಿದ್ದ ಅನಧಿಕೃತ ಲೋಡ್ ಶೆಡ್ಡಿಂಗ್ ರದ್ದು ಮಾಡಲಾಗಿದೆ ಎಂದು ಕೆಪಿಟಿಸಿಎಲ್ ಮೂಲಗಳು ತಿಳಿಸಿವೆ. ರಾಜ್ಯದ ನಾನಾ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಈ ಮೂಲಕ ಜಲವಿದ್ಯುತ್ ಉತ್ಪಾದಿಸುವ ಜಲಾಶಯಗಳ ಒಳಹರಿವು ಹೆಚ್ಚಿರುವುದರಿಂದ ವಿದ್ಯುತ್ ಕಡಿತ ರದ್ದು ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಬೇಡಿಕೆಯಷ್ಟು ಪ್ರಮಾಣದ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗಿರುವ ಹಿನ್ನಲೆಯಲ್ಲಿ ಬುಧವಾರ (ಜು 15) ರಾತ್ರಿಯಿಂದಲೇ ಜಾರಿಗೆ ಬರುವಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಪಿಟಿಸಿಎಲ್ ಮೂಲಗಳಿಂದ ತಿಳಿದು ಬಂದಿದ್ದು, ಸರಕಾರದಿಂದ ಅಧಿಕೃತ ಪ್ರಕಟಣೆ ಹೊರಬೀಳಬೇಕಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X