ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಂಗೂಬಾಯಿ ದೇಹಸ್ಥಿತಿ ವಿಷಮ

By Staff
|
Google Oneindia Kannada News

Gangubai Hangal
ಹುಬ್ಬಳ್ಳಿ, ಜು. 17 : ಹಿರಿಯ ಹಿಂದುಸ್ತಾನಿ ಗಾಯಕಿ ಗಂಗೂಬಾಯಿ ಹಾನಗಲ್ ಅವರ ದೇಹಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. 97 ವರ್ಷದ ಗಂಗೂಬಾಯಿ ಹೃದಯ ಸಂಬಂಧ ಕಾಯಿಲೆಯಿಂದ ಬಳಲುತ್ತಿದ್ದು, ಎರಡು ದಿನದ ಹಿಂದೆ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.

ಗುರುವಾರ ತಡರಾತ್ರಿ ಅವರನ್ನು ಇನ್ನೊಂದು ಸುಸಜ್ಜಿತ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈಗ ಉಸಿರಾಟದ ತೊಂದರೆ ಅನುಭವಿಸುತ್ತಿದ್ದಾರೆಂದು ಅವರನ್ನು ನೋಡಿಕೊಳ್ಳುತ್ತಿರುವ ವೈದ್ಯರು ತಿಳಿಸಿದ್ದಾರೆ. ಇವರನ್ನು ನೋಡಿಕೊಳ್ಳುತ್ತಿರುವ ವೈದ್ಯ ಡಾ. ಕಲಾಮದಾನಿ, ಗಂಗೂಬಾಯಿ ಅವರಿಗೆ ಉಸಿರಾಟದ ತೊಂದರೆ ಇದೆ. ಅಲ್ಲದೇ ಹೃದಯಾ ಸಂಬಂಧ ಕಾಯಿಲೆಗಳಿ೦ದ ಬಳಲುತ್ತಿದ್ದಾರೆ. ಅವರಿಗೆ ಈಗ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ನಮ್ಮ ಚಿಕಿತ್ಸೆಗೆ ಅವರು ಸ್ಪಂದಿಸುತ್ತಿದ್ದಾರೆ. ಆದರೆ ಈಗ ಇನ್ನು ಏನು ಹೇಳಲಾಗದು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X