• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಂಚಭೂತಗಳಲ್ಲಿ ಲೀನವಾದ ಗಂಗಜ್ಜಿ

By Staff
|

ಹುಬ್ಬಳ್ಳಿ, ಜು. 22 : ಮಂಗಳವಾರ ನಿಧನರಾದ ಗಾನಕೋಗಿಲೆ ಡಾ ಗಂಗೂಬಾಯಿ ಹಾನಗಲ್ ಅವರನ್ನು ಇಂದು ಸಕಲ ಸರಕಾರಿ ಮಾರ್ಯದೆ ಹಾಗೂ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಗರದ ನೃಪತುಂಗ ಬೆಟ್ಟದಡಿ ಇರುವ ಗುರುಕುಲ ಟ್ರಸ್ಟ್ ನಲ್ಲಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು. ಗಂಗೂಬಾಯಿ ಹಾನಗಲ್ ಅವರ ಮಗ ಬಾಬುರಾವ್ ಅವರ ಗಾನಗಂಗೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಗಂಗಜ್ಜಿ ದುಖಃತಪ್ತ ಕುಟುಂಬ, ವಿಧಾನಸಭೆ ಸ್ಪೀಕರ್ ಜಗದೀಶ್ ಶೆಟ್ಟರ್, ವಿಧಾನ ಪರಿಷತ್ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಸಂಸದ ಪ್ರಲ್ಹಾದ ಜೋಶಿ, ಮಾಜಿ ಸಚಿವ ಬಸವರಾಜ ಹೊರಟ್ಟಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರು, ಧಾರವಾಡ ಜಿಲ್ಲಾಧಿಕಾರಿ ಹಾಗೂ ಸಂಗೀತ ಲೋಕ ಅಪಾರ ಅಭಿಮಾನಿಗಳು ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದರು. ಅದರೆ, ಮೇರು ಗಾಯಕಿ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಅನುಪಸ್ಥಿತಿ ಎದ್ದು ಕಾಣುತ್ತಿತ್ತು.

ಇದಕ್ಕೂ ಮೊದಲು ದೇಶಪಾಂಡೆ ನಗರದಲ್ಲಿರುವ ಅವರ ನಿವಾಸದಿಂದ ಗುರುಕುಲ ಟ್ರಸ್ಟ್ ವರಗೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X