ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿ : ಆಚಾರ್ಯ
ಬೆಂಗಳೂರು,
ಜು. 24 : ರಾಜ್ಯದಲ್ಲಿ ಸಂಪೂರ್ಣ ಗೋವಂಶ ಹತ್ಯೆ ನಿಷೇಧ ಕಾನೂನು ಜಾರಿಗೆ ತರಲು ಸರಕಾರ ಬದ್ಧವಾಗಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ತಿಳಿಸಿದ್ದಾರೆ. ಕಾನೂನು ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಸಮ್ಮತಿಯನ್ನೂ ಈ ವಾರದೊಳಗೆ ಪಡೆದುಕೊಳ್ಳುವ ಪ್ರಯತ್ನ ನಡೆಸಲಾಗುವುದು ಎಂದು ಅವರು ಹೇಳಿದರು. id="toptextpromo">ಗೋವಂಶ
ಹತ್ಯೆ ಮುಕ್ತ ಕರ್ನಾಟಕ ನಿರ್ಮಾಣ ಸಂಘಟನೆಗಳ ಒಕ್ಕೂಟ ನಗರದಲ್ಲಿ ಆಯೊಜಿಸಿದ್ದ ಸರ್ವಧರ್ಮ ಗುರುಗಳ ಶೃಂಗ ಸಭೆಯಲ್ಲಿ ಅವರು ಈ ಭರವಸೆ ನೀಡಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದೆ. ಆದರೆ ಕಾನೂನನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿಲ್ಲ. ಗೋವುಗಳ ಸಾಗಾಣಿಕೆ ಆಗುತ್ತಿರುವ ಆರೋಪಗಳು ಕೇಳಿಬರುತ್ತಲೇ ಇವೆ. ಹಾಗಾಗಿ ಹೊಸ ಕಾನೂನು ರೂಪಿಸುವ ಚಿಂತನೆ ನಡೆಸಲಾಗಿದೆ ಎಂದು ಆಚಾರ್ಯ ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications