ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಬಂಧನ

ಮೈಸೂರಿನಲ್ಲಿ ಪ್ರಮೋದ್ ಮುತಾಲಿಕ್ ಪ್ರಚೋದನಾಕಾರಿ ಭಾಷಣ ಮಾಡಿದ ಪರಿಣಾಮ ಅದರಿಂದ ಪ್ರಚೋದಿತರಾಗಿ ಗಲಭೆಗಳು ನಡೆದವು. ಕ್ಯಾತಮಾರನಹಳ್ಳಿ ಗಲಭೆಯಲ್ಲಿ ಮೂರು ಜನ ಮೃತಪಟ್ಟಿದ್ದರು. ಇದಕ್ಕೆಲ್ಲಾ ಮುತಾಲಿಕ್ ಅವರ ಪ್ರಚೋದನಕಾರಿ ಭಾಷಣವೇ ಕಾರಣ ಎಂದು ಆರೋಪಿಸಿ ಮುತಾಲಿಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಶುಕ್ರವಾರ ರಾತ್ರಿ 12.30ರ ಸಮಯದಲ್ಲಿ ಬೆಳಗಾವಿಯಲ್ಲಿ ಪ್ರಮೋದ್ ಮುತಾಲಿಕ್ ಅವರನ್ನು ಬಂಧಿಸಲಾಯಿತು. ನಂತರ ಅವರನ್ನು ಮೈಸೂರಿಗೆ ಕರೆತರಲಾಗಿದೆ. ಶನಿವಾರ ಮಧ್ಯಾಹ್ನ ಅಥವಾ ಸಂಜೆ 4 ಗಂಟೆಗೆ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸುವ ಸಾಧ್ಯತೆಗಳಿವೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications