ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸದ್ಯಕ್ಕೆ ಕೆಎಂಎಫ್ ಗೆ ಸೋಮಶೇಖರ ರೆಡ್ಡಿಯೇ ಬಾಸು!

By Staff
|
Google Oneindia Kannada News

Somashekar Reddy
ಬೆಂಗಳೂರು, ಜು.25: ಕರ್ನಾಟಕ ಹಾಲು ಒಕ್ಕೂಟದ ನೂತನ(ಕೆಎಂಎಫ್) ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಳ್ಳಾರಿ ಶಾಸಕ ಸೋಮಶೇಖರ ರೆಡ್ಡಿ ಮೂರು ತಿಂಗಳು ಮಾತ್ರ ಕಾರ್ಯನಿರ್ವಹಿಸಲಿದ್ದಾರೆ. ನಂತರ ಕೆಎಂಎಫ್ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದಗೌಡ ಅಲಂಕರಿಸಲಿದ್ದಾರೆ.

ಸದಾನಂದಗೌಡರ ಬಿಜೆಪಿ ಅಧ್ಯಕ್ಷ ಅವಧಿ ನವೆಂಬರ್ ತಿಂಗಳಿಗೆ ಅಂತ್ಯವಾಗಲಿದೆ. ಈಗಾಗಲೇ ಎರಡು ಬಾರಿ ಸದಾನಂದ ಗೌಡ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೂರನೇ ಬಾರಿ ಅಧ್ಯಕ್ಷರಾಗಲು ಬಿಜೆಪಿ ಪಕ್ಷದಲ್ಲಿ ಅವಕಾಶವಿಲ್ಲ. ಹಾಗಾಗಿ ನವೆಂಬರ್ ತಿಂಗಳ ನಂತರ ಸದಾನಂದಗೌಡ ಅವರನ್ನು ಕೆಎಂಎಫ್ ಗೆ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸೋಮಶೇಖರ್ ರೆಡ್ಡಿ ಅವರನ್ನು ಕೆಎಂಎಫ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವ ಬಗ್ಗೆ ಬಿಜೆಪಿಯಲ್ಲಿ ಈಗಾಗಲೇ ಅಸಂತೃಪ್ತಿ ವ್ಯಕ್ತವಾಗಿದೆ. ಸದಾನಂದಗೌಡ ಅವರನ್ನು ಕೆಎಂಎಫ್ ನ ನಿರ್ದೇಶಕರಾಗಿ ನಾಮಕರಣ ಮಾಡಲಾಗಿದೆ. ಮೂರು ತಿಂಗಳ ನಂತರ ಸದಾನಂದಗೌಡ ಕೆಎಂಎಫ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ ಎನ್ನುತ್ತವೆ ಪಕ್ಷದ ಮೂಲಗಳು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X