ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇವಿಎಂ ಬಳಕೆ : ಅರ್ಜಿ ವಜಾಗೊಳಿಸಿದ ಸು.ಕೋರ್ಟ್

By Staff
|
Google Oneindia Kannada News

ನವದೆಹಲಿ, ಜು. 27 : ಮತಯಂತ್ರಗಳ ಬಳಕೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರಿಂಕೋರ್ಟ್ ವಜಾಗೊಳಿಸಿದೆ. ಎಲೆಕ್ಟ್ರಾನಿಕ್ ಮತಯಂತ್ರಗಳ ಮೂಲಕ ಮೋಸ ಮಾಡುವ ಸಾಧ್ಯತೆಯಿದೆ. ಈಗಾಗಲೇ ಹಿರಿಯ ಐಎಎಸ್ ಅಧಿಕಾರಿಯೊಬ್ಬರು ಕೇಂದ್ರ ಚುನಾವಣೆ ಆಯೋಗದ ಮುಂದೆ ಸವಿವರವಾಗಿ ಸ್ಪಷ್ಟಪಡಿಸಿದ್ದಾರೆ. ಆದ್ದರಿಂದ ಮತಯಂತ್ರಗಳ ಬಳಕೆಯನ್ನು ನಿಷೇಧಿಸಬೇಕು ಎಂದು ಹೈದರಾಬಾದ್ ಮೂಲಕ ಸರಕಾರರೇತರ ಸಂಸ್ಥೆಯೊಂದು ಸುಪ್ರಿಂಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ಇಂದು ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರಿದ್ದ ಏಕಸದಸ್ಯ ಪೀಠ, ಮತಯಂತ್ರಗಳ ಬಳಕೆಗೆ ಸಂಬಂಧಿಸಿದಂತೆ ಅರ್ಜಿದಾರರು ಕೇಂದ್ರ ಚುನಾವಣೆ ಆಯೋಗದ ಅರ್ಜಿ ಸಲ್ಲಿಸಿ ಎಂದು ಸಲಹೆ ನೀಡಿದೆ. ಈ ಹಿಂದೆ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೂಡಾ ಇದರ ಬಗ್ಗೆ ಅವಸ್ವರ ಎತ್ತಿದ್ದರು. ಕೇಂದ್ರದ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಲಾಲು ಪ್ರಸಾದ್ ಯಾದವ್, ಎಡಪಕ್ಷಗಳ ಮುಖಂಡರು ಮತಯಂತ್ರಗಳ ಮೂಲಕ ಮೋಸ ಎಸಗುವ ಎಲ್ಲ ಸಾಧ್ಯತೆಗಳು ಇದ್ದು, ಮುಂದಿನ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸಬೇಕು ಎಂದು ಚುನಾವಣೆ ಆಯೋಗವನ್ನು ಆಗ್ರಹಿಸಿದ್ದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X