ತಿರುವಳ್ಳುವರ್ ಪ್ರತಿಮೆ : ಆಗಸ್ಟ್ 3 ರಂದು ಸಭೆ

ಕಾರ್ಯಕ್ರಮದ ಸ್ವರೂಪ ಕುರಿತು ಚರ್ಚಿಸಲು ಪ್ರತಿಪಕ್ಷ ನಾಯಕರು, ಎಲ್ಲಾ ಪಕ್ಷಗಳ ಅಧ್ಯಕ್ಷರು, ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡ ನಂತರವೇ ಮುಂದಿನ ಹೆಜ್ಜೆ ಇಡಲಾಗುತ್ತದೆ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಸರ್ವಜ್ಞ ಪ್ರತಿಮೆ ಅನಾವರಣದ ಜಾಗದ ಕುರಿತು ಅಪಸ್ವರವಿದೆ. ಈ ಬಗ್ಗೆ ಕನ್ನಡಪರ ಸಂಘಟನೆಗಳ ಜೊತೆ ಚರ್ಚಿಸಲಾಗುವುದು. ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಉಭಯ ಭಾಷಿಗರೂ ಪಾಲ್ಗೊಳ್ಳಬೇಕು ಎಂದು ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications