ಶಾಲಾ ಮಕ್ಕಳಿಗೆ ಪಾಠ ಹೇಳಿದ ಪ್ರೊ. ಸಿಎನ್ ಆರ್ ರಾವ್

ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್. ಟಾಟಾ ಸಭಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ ವಿಜ್ಞಾನ ಮತ್ತು ತಂತ್ರಜ್ಞಾನ ದಾರ್ಶನಿಕ ಸಮೂಹದ ಹಾಗೂ ಕರ್ನಾಟಕ ವಿಜ್ಞಾನ ವಿದ್ಯಾ ಜಾಗೃತಿ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಮಕ್ಕಳಿಗೆ ಬೇಸರ ತರಿಸದೆ, ಕನ್ನಡ ಪದಗಳಿಗೆ ತಡಕಾಡದೆ, ಅಚ್ಚ ಕನ್ನಡದಲ್ಲಿ ನಿರರ್ಗಳವಾಗಿ ಮಹಾಸ್ಫೋಟ, ಬ್ಯಾಕ್ಟೀರಿಯಾ ಜನನ, ಭೂಮಿಯ ಹುಟ್ಟು ಮುಂತಾದ ವಿಷಯಗಳನ್ನು ಅವರು ಸರಳವಾಗಿ ಮನಮುಟ್ಟುವಂತೆ ಮಕ್ಕಳಿಗೆ ಪಾಠ ಹೇಳಿದರು.
ಕರ್ನಾಟಕ ವಿಜ್ಞಾನ ಕ್ಷೇತ್ರದಲ್ಲಿ ಬಹಳ ಮುಂದುವರಿಯಬೇಕಾದರೆ ಶಾಲಾ ಮಕ್ಕಳು ಅದರಲ್ಲೂ ಹಳ್ಳಿಯ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು. ಬೆಂಗಳೂರು ಬಿಟ್ಟು ಹೊರಗೆ ಹೋದರೆ ಮಕ್ಕಳಿಗೆ ವಿಜ್ಞಾನದ ಬಗ್ಗೆ ಆಸಕ್ತಿ ಇದೆ. ಒಬ್ಬಿಬ್ಬರು ವಿಜ್ಞಾನಿಗಳಾದರೆ ಸಾಲದು. ಅವಿಷ್ಕಾರಗಳ ಬದಲು ಅನ್ವಯಿಕಶಾಸ್ತ್ರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸುತ್ತಿದಾರೆ. ಮಾನವನ ಸಂತೋಷಕ್ಕೆ ಹಣ ಗಳಿಸುವುದೇ ಮುಖ್ಯವಲ್ಲ ಎಂದು ಅಭಿಪ್ರಾಯಪಟ್ಟರು.
ನೂರು ವರ್ಷಗಳ ಹಿಂದೆ ಪರಮಾಣು, ರಾಸಾಯನಿಕ ಬಂಧ, ಕ್ಷ-ಕಿರಣಗಳು, ಡಿಎನ್‌ಎಗಳ ಬಗ್ಗೆ ಅರಿವಿರಲಿಲ್ಲ. ಈಗ ವಿಜ್ಞಾನ ಕ್ಷೇತ್ರದಲ್ಲಿ ನಿರಂತರ ಪ್ರಗತಿಯಾಗುತ್ತಿದೆ. ವಿಜ್ಞಾನ, ಕಲೆ, ಆಧ್ಯಾತ್ಮ ಯಾವುದೇ ಇರಲಿ, ಮಕ್ಕಳು ತಮಗೆ ಆಸಕ್ತಿ ಇರುವ ಕ್ಷೇತ್ರವನ್ನು ತಾವೇ ಆರಿಸಿಕೊಂಡು ಶ್ರೇಷ್ಠತೆಯನ್ನು ಸಾಧಿಸಲು ಶ್ರಮ ಪಡಬೇಕು ಎಂದು ಅವರು ಸಲಹೆ ನೀಡಿದರು.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಅಶೋಕ್ ಕುಮಾರ್ ಸಿ. ಮನೋಳಿ ಅವರು ಮಾತನಾಡಿ ಪರಿಣಾಮಕಾರಿ ವಿಜ್ಞಾನ ಕಲಿಕೆ ಹಾಗೂ ಸಂಶೋಧನೆಗೆ ಪ್ರೋತ್ಸಾಹ ನೀಡುವ ದೂರದೃಷ್ಟಿಯಿಂದ ದಾರ್ಶನಿಕ ಸಮೂಹವು ವಿಜ್ಞಾನ ಶಿಕ್ಷಣ ಮತ್ತು ತಂತ್ರಜ್ಞಾನ ಅಭಿವೃದ್ಧಿಗೆ ಪೂರಕವಾದ 17 ಕಾರ್ಯಕ್ರಮಗಳನ್ನು ವಿವಿಧ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜವಾಹರಲಾಲ್ ನೆಹರು ಉನ್ನತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಪ್ರೊ. ರೊದ್ದಂ ನರಸಿಂಹ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಅಧ್ಯಕ್ಷ ಡಾ. ಹೆಚ್.ಎಸ್. ನಿರಂಜನಾರಾಧ್ಯ ಮತ್ತಿತರ ಹಿರಿಯ ವಿಜ್ಞಾನಿಗಳ ಉಪಸ್ಥಿತರಿದ್ದರು.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications