ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಪ್ಟೆಂಬರ್ ನಲ್ಲಿ ವಿಶೇಷ ಅಧಿವೇಶನ : ಸಿಎಂ

By Special Assembly session to be held in Sept: Yeddyurappa
|
Google Oneindia Kannada News

ಮೈಸೂರು, ಆ. 5 : ವಿವಿಧ ವಿಷಯಗಳ ಬಗ್ಗೆ ಸೆಪ್ಟೆಂಬರ್ ತಿಂಗಳಿನ ಎರಡನೇ ವಾರದಲ್ಲಿ 5 ದಿನಗಳ ಕಾಲ ವಿಶೇಷ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಶೇಷ ಅಧಿವೇಶನದ ಮೊದಲ ಮೂರು ದಿನಗಳನ್ನು ಗ್ರಾಮೀಣ ಅಭಿವೃದ್ಧಿ ಕುರಿತ ವಿಷಯಗಳ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು. ಉಳಿದ ಎರಡು ದಿನಗಳನ್ನು ಇತ್ತೀಚೆಗೆ ನಡೆದಿರುವ ಬೆಳವಣಿಗೆ ಹಾಗೂ ಪ್ರತಿಪಕ್ಷಗಳು ಆರೋಪಿಸುತ್ತಿರುವ ಹಗರಣಗಳ ಬಗ್ಗೆ ಸೂಕ್ತ ವೇದಿಕೆ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

ರಾಜ್ಯದ ಹಣಕಾಸಿನ ಸ್ಥಿತಿಯ ಬಗ್ಗೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ ಎಂದಿ ಅಸಮಾಧಾನ ವ್ಯಕ್ತಪಡಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ ತಮ್ಮ ಸ್ಥಾನದ ಘನತೆ ಅರಿತು ಮಾತನಾಡಬೇಕು ಎಂದರು. ಜಗತ್ತಿನಲ್ಲಿ ಆರ್ಥಿಕ ಕುಸಿತ ಎಲ್ಲ ವಲಯದಲ್ಲೂ ಭಾರಿ ಪ್ರಮಾಣದಲ್ಲಿ ಆವರಿಸಿದೆ. ಈ ಮಧ್ಯೆ ರಾಜ್ಯ ಸರಕಾರ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ ಎಂದು ಸಮರ್ಥಿಸಿಕೊಂರು. ಆದರೆ, ಸಿದ್ದರಾಮಯ್ಯ ಹೇಳಿಕೆಯಲ್ಲಿ ಯಾವುದೇ ಸತ್ವ ಇಲ್ಲ ಎಂದು ಅವರು ಹೇಳಿದರು.

ಪಕ್ಷದೊಳಗೆ ಭಿನ್ನಮತ ನಡೆಸುತ್ತಿರುವ ಶಾಸಕರ ವಿರುದ್ಧ ಗಂಭೀರ ಚಿಂತನೆ ಆರಂಭವಾಗಿದೆ. ಇಂತಹವರ ವಿರುದ್ಧ ಪಕ್ಷದ ಹೈಕಮಾಂಡ್ ಸೂಕ್ತ ಕೈಗೊಳ್ಳಲಿದೆ ಎಂದು ಹೇಳಿದರು. ಶಾಸಕ ಬೇಳೂರು ಗೋಪಾಲಕೃಷ್ಣ ಮತ್ತು ರೇಣುಕಾಚಾರ್ಯ ಅವರಿಗೆ ಉಲ್ಲಂಘನೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿಲಾಗಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X