ಬೆಂಗಳೂರು ಬಂದ್ ನಡೆಸಿದರೆ ಕಠಿಣ ಕ್ರಮ : ಕೋರ್ಟ್

ಕನ್ನಡ ವಿರೋಧಿ ನೀತಿ ಅನುಸರಿಸುತ್ತಿರುವ ಸರಕಾರದ ಕ್ರಮವನ್ನು ತಡೆಯಬೇಕು. ತಿರುವಳ್ಳುವರ್ ಪ್ರತಿಮೆ ಅನಾವರಣಗೊಳಿಸದಂತೆ ಸರಕಾರಕ್ಕೆ ನಿರ್ದೇಶನ ನೀಡಬೇಕು ಎಂದು ವಾಟಾಳ್ ನಾಗರಾಜ್ ನೇತೃತ್ವದ ಕನ್ನಡಪರ ಸಂಘಟನೆಗಳು ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿಯನ್ನು ತಿರಸ್ಕೃರಿಸಿದೆ. ಇದರೊಂದಿಗೆ ತಿರುವಳ್ಳುವರ್ ಪ್ರತಿಮೆ ಅನಾವರಣ ಸಮಾರಂಭದ ಹಾದಿ ಸಗಮಗೊಂಡಂತಾಯಿತು.
ಬೆಂಗಳೂರು ಬಂದ್ ಕರೆ ನೀಡುವವರ ವಿರುದ್ದ ಸರಕಾರ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸರಕಾರ ಸೂಕ್ತ ಸಿದ್ಧತೆಗಳನ್ನು ತೆಗೆದುಕೊಳ್ಳಿ. ತಿರುವಳ್ಳುವರ್ ಪ್ರತಿಮೆ ದಿನದಂದು ಅನಗತ್ಯವಾಗಿ ಸಾರ್ವಜನಿಕರಿಗೆ ತೊಂದರೆ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ನ್ಯಾಯಾಲಯ ಸರಕಾರಕ್ಕೆ ಸೂಚನೆ ನೀಡಿದೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications