ಗುಲ್ಬರ್ಗದಲ್ಲಿ ಸಂಪುಟ ಸಭೆ : ಸಿಎಂ

Yeddyurappa
ಗುಲ್ಬರ್ಗ, ಆ. 12 : ಉತ್ತರ ಕರ್ನಾಟಕದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಮುಂದಿನ ಸೆಪ್ಟೆಂಬರ್ ತಿಂಗಳಿನಲ್ಲಿ ಗುಲ್ಬರ್ಗದಲ್ಲಿ ವಿಶೇಷ ಸಂಪುಟ ಸಭೆ ನಡೆಸಲಾಗುವುದೆಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ವಾಲ್ಮೀಕಿ ನಾಯಕ್ ಪರ ಚುನಾವಣ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಸಿಎಂ, ಈಗಾಗಲೇ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಸಿ ಹಲವರು ಅಭಿವೃದ್ದಿ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದೇವೆ. ಹೈದರಾಬಾದ್ ಕರ್ನಾಟಕ ಅಭಿವೃದ್ದಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.

ರಾಜ್ಯದ ಜನತೆ ಎಚ್1ಎನ್1 ಬಗ್ಗೆ ಭಯಪಡುವ ಅಗತ್ಯವಿಲ್ಲ. ಈಗಾಗಲೇ ಈ ರೋಗದ ಬಗ್ಗೆ ಮುಂಜಾಗ್ರತಾ ಕ್ರಮಕೈಗೊಳ್ಳಲಾಗಿದೆ. ನೆರೆ ಮತ್ತು ಬರದ ಬಗ್ಗೆ ಮಾಹಿತಿಗಳನ್ನು ಸಂಗ್ರಹಿಸಲಾಗಿದ್ದು ಸೂಕ್ತ ಪರಿಹಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ಸಾರ್ವಜನಿಕರಿಗೆ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+