ನೇಗಿಲ ಯೋಗಿ ಹಾಡು ರೈತಗೀತೆಯಾದ ಸಂದರ್ಭ

ರಾಷ್ಟ್ರೀಯ ಹಬ್ಬ, ನಾಡಹಬ್ಬಗಳ ಸಂದರ್ಭ ನೇಗಿಲ ಯೋಗಿ ಗೀತೆ ಹಾಡಬೇಕು. ಈಗಾಗಲೇ ರಾಜ್ಯ ಸರ್ಕಾರ ಆದೇಶ ಕೂಡ ಹೊರಡಿಸಿದೆ. ಈ ಮೂಲಕ ರೈತನನ್ನು ನೆನೆಪಿಸಿಕೊಳ್ಳುವ ಗೀತೆಯೊಂದು ಏಕರೂಪದಲ್ಲಿ ಪ್ರಸ್ತುತಗೊಂಡಿತು.
ಕಾರ್ಗಿಲ್ ಯೋಧರಿಗೆ ಆರ್ಥಿಕ ಸಹಾಯ : ಸ್ವಾತಂತ್ರ್ಯ ದಿನಾಚರಣೆ ಮಹತ್ವದ ಗಳಿಗೆಯಲ್ಲಿ ಕಾರ್ಗಿಲ್ ಸೇರಿದಂತೆ ದೇಶಕ್ಕಾಗಿ ವೀರಮರಣ ಹೊಂದಿದ ಯೋಧರ ಹಾಗೂ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಸ್ವಾತಂತ್ರ ಯೋಧರಿಗೆ ವಿವಿಧ ಸೌಲಭ್ಯ ಹಾಗೂ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದೆ. ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಮೈದಾನದಲ್ಲಿ ಗೌರವ ವಂದನೆ ಸ್ವೀಕರಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, 63ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು
ನಂತರ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರ 16 ವೀರ ಯೋಧರ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಈ ಸಂದರ್ಭದಲ್ಲಿ ಘೋಷಿಸಿದರು. ಅಲ್ಲದೆ, ಕಾರ್ಗಿಲ್‌ನಲ್ಲಿ ಮಡಿದ ಹುತಾತ್ಮರ ಸ್ಮರಣಾರ್ಥವಾಗಿ ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು. ಸ್ವಾತಂತ್ರ್ಯ ಸಂಗ್ರಾಮದ ನೆಲೆಗಳ ಅಭಿವೃದ್ಧಿಗಾಗಿ 10ಕೋಟಿ ರೂಪಾಯಿ ವ್ಯಯಿಸಲಾಗುವುದು ಎಂದು ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ಏರಿಕೆ ಮಾಡಲಾಗಿದ್ದು, ಗೋವಾ ಚಳವಳಿಗಾರರಿಗೆ ಒಂದು ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಪಿಂಚಣಿ, ಉದ್ಯೋಗ ಯೋಜನೆಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಎಲ್ ಮಹನೀಯರ ಬಗ್ಗೆ ರಾಜ್ಯ ಎಚ್ಚರಿಕೆ ಕಾರ್ಯಕ್ರಮಗಳು ಅಗತ್ಯವಾಗಿದೆ ಎಂದು ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಯೋಧರ ಸವಿನೆಪಿಗೆ ಪ್ರತಿ ಜಿಲ್ಲೆಯಲ್ಲೂ ಮೆಮೋರಿಯಲ್ ಗಳನ್ನು ನಿರ್ಮಿಸಲು 10 ಕೋಟಿ ರುಪಾಯಿಗಳನ್ನು ಬಜೆಟ್ ನಲ್ಲಿ ತೆಗೆದಿರಿಸಲಾಗಿದೆ ಎಂದು ಹೇಳಿದರು.
ಮಾಣಿಕ್ ಶಾ ಫೆರೆಡ್ ಮೈದಾನದಲ್ಲಿ 300 ಶಾಲಾ ಮಕ್ಕಳು ಭಾಗವಹಿಸಿದ್ದರು. ಸಚಿವರು, ಹಿರಿಯ ಅಧಿಕಾರಿಗಳು ಸೇರಿ ಸುಮಾರು 10 ಸಾವಿರಕ್ಕೂ ಹೆಚ್ಚು ಜನರು 63 ಸ್ವಾತಂತ್ರ್ಯ ದಿನಾಚರಣೆಯ ಭವ್ಯವಾದ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಮುಂಜಾಗ್ರತಾ ಕ್ರಮವಾಗಿ ಮೈದಾನದ ಸುತ್ತ ಭಾರಿ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿತ್ತು.












Click it and Unblock the Notifications