ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಂಪು ಕೋಟೆಯ ಮನಮೋಹನ್ ಸಿಂಗ್ ಭಾಷಣ

By Staff
|
Google Oneindia Kannada News

PM assures country of assistance and action
ನವದೆಹಲಿ, ಆ. 15 : ದೇಶದ 63 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿಕೊಳ್ಳುವುದು ಕೇಂದ್ರ ಸರಕಾರದ ಗುರಿಯಾಗಿದೆ. ಕೇಂದ್ರದ ಯುಪಿಎ ಸರಕಾರ ಜನಪರ ಆಡಳಿತ ನೀಡಲಿದೆ. ಜೊತೆಗೆ ಆರ್ಥಿಕತೆ ಇನ್ನಷ್ಟು ವೃದ್ಧಿಗೊಳಿಸುವ ಮತ್ತಷ್ಟು ಕಾರ್ಯಕ್ರಮಗಳು, ನೀತಿ ನಿಯಮಗಳನ್ನು ಜಾರಿಗೊಳಿಸಲಾಗುವುದು. ದೇಶದಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರೈತನ ಬೆನ್ನಿಗೆ ಕೇಂದ್ರ ಸರಕಾರ ಇರಲಿದೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದರು.

ಸತತ ಆರನೇ ಬಾರಿಗೆ ನವದೆಹಲಿಯ ಕೆಂಪು ಕೋಟೆಯ ಸ್ವಾತಂತ್ರ ದಿನಾಚರಣೆ ನೆರವೇರಿಸಿದ ನಂತರ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರಕಾರ ಜನರಿಗೆ ಹತ್ತಿರವಾಗುವಂತಹ ಕೆಲಸ ಮಾಡಲಿದೆ ಎಂದರು. ಸ್ವಾತಂತ್ರ್ಯ ದಿನಾಚರಣೆಯಂತಹ ಸಂಭ್ರಮದ ಗಳಿಗೆಯಲ್ಲಿ ದೇಶದ ಜನತೆ ಎಚ್ 1 ಎನ್ 1 ಜ್ವರ ಜನತಗೆ ಜೀವನವನ್ನು ಕೆಂಗಡಿಸಿದೆ. ಸೂಕ್ತ ತಿಳುವಳಿಕೆ ಕೊರತೆ ಇಲ್ಲದ ಕೆಲವರು ಅನಗತ್ಯವಾಗಿ ಸಮಾಜದಲ್ಲಿ ಭೀತಿ ಹುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಯಾರು ತಲೆ ಕೆಡಿಸಿಕೊಳ್ಳಬಾರದು ಎಂದು ಸಲಹೆ ನೀಡಿದರು. ಸರಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದರು.

ದೇಶದಲ್ಲಿ ಬರ ಛಾಯೆ ಆವರಿಸಿದ ಹಿನ್ನೆಲೆಯಲ್ಲಿ ಅಗತ್ಯ ಸಾಮಗ್ರಿಗಳ ಬೆಲೆಗಳು ಗಗನಕ್ಕೇರುತ್ತಿವೆ. ಈ ಬಗ್ಗೆ ಕೇಂದ್ರ ಸರಕಾರ ಈಗಾಗಲೇ ಅಗತ್ಯ ಕ್ರಮಕೈಗೊಳ್ಳಲಿದೆ. ಜೊತೆಗೆ ದೇಶದ ಬೆನ್ನೆಲುಬಾಗಿರುವ ರೈತನಿಗೆ ಈ ದಿನಗಳಲ್ಲಿ ಕಷ್ಟ ಕಾರ್ಪಣ್ಯಗಳು ಬರಲಿವೆ. ಈ ಬಗ್ಗೆ ಕೇಂದ್ರ ಸರಕಾರ ಸಮಗ್ರ ಅಧ್ಯಯನ ನಡೆಸಿ, ಅನ್ನ ನೀಡುವ ರೈತನ ಹಿತ ಕಾಪಾಡಲು ಬದ್ಧವಾಗಿದೆ ಎಂದು ಸಿಂಗ್ ಭರವಸೆ ನೀಡಿದರು.

ಭಾರತದ ಆರ್ಥಿಕತೆಯನ್ನು ಈ ವರ್ಷದ ಕೊನೆಗೆ ಯಥಾಸ್ಥಿತಿಗೆ ತರುವುದು ಸರಕಾರದ ಮುಖ್ಯ ಉದ್ದೇಶವಾಗಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಕ್ಷೇತ್ರಗಳ ಮೇಲೂ ಭಾರಿ ಪರಿಣಾಮ ಬೀರಿದೆ. ಇದರಿಂದ ಅನೇಕ ವಿದ್ಯಾವಂತರು ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ, ಭಾರತ ಇಂತಹ ಆರ್ಥಿಕ ಕುಸಿತದ ನಡುವೆಯೂ ಉತ್ತಮ ಕಾರ್ಯಕ್ಷಮತೆಯಿಂದ ಆರ್ಥಿಕ ಪರಿಸ್ಥಿತಿಯನ್ನು ಕಾಯ್ದುಕೊಂಡು ಬಂದಿದೆ. ಈ ವರ್ಷ ಕೊನೆಯಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಮನಮೋಹನ್ ಸಿಂಗ್ ಹೇಳಿದರು. ಭಯೋತ್ಪಾದನೆ ಪಿಡುಗಾಗಿದ್ದು, ಇದರ ಬಗ್ಗೆ ಕೇಂದ್ರ ಇನ್ನಷ್ಟು ಗಂಭೀರ ಕ್ರಮಗಳನ್ನು ಕೈಗೊಳ್ಳಲಿದೆ ಎಂದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X