ರಾಜ್ಯಮಟ್ಟದ ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ
ಬೆಂಗಳೂರು, ಆ.15: 2009-10 ನೇ ಸಾಲಿಗೆ ರಾಜ್ಯಮಟ್ಟದ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ (NTSE) ಮತ್ತು ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿ ವೇತನ ಪರೀಕ್ಷೆಯು (NMMS) ದಿನಾಂಕ 8/11/2009 ರ ಭಾನುವಾರದಂದು ರಾಜ್ಯದ ಆಯ್ದ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಎರಡೂ ಪರೀಕ್ಷೆಗಳನ್ನು ಪ್ರಸ್ತುತ 8ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ತೆಗೆದುಕೊಳ್ಳಬಹುದಾಗಿದೆ.
ವಿದ್ಯಾರ್ಥಿಗಳು ಅರ್ಜಿ ಮತ್ತು ಮಾಹಿತಿ ಪುಸ್ತಕಗಳನ್ನು ತಮ್ಮ ಹತ್ತಿರದ ಕ್ಶೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಅಥವಾ www.dsert.kar.nic.in ವೆಬ್‌ಸೈಟ್‌ನಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಆಗಸ್ಟ್ 30, 2009.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications