ಚನ್ನಪಟ್ಟಣ : ಜೆಡಿಎಸ್ ಕಾರ್ಯಕರ್ತರ ಮೇಲೆರಗಿದ ಲಾಠಿ

ಚುನಾವಣಾ ಮುನ್ನಾದಿನ ಚನ್ನಪಟ್ಟಣದಲ್ಲಿ ಬಿಜೆಪಿ ಸಚಿವರಾದ ಕಟ್ಟಾಸುಬ್ರಮಣ್ಯನಾಯ್ಡು, ವೆಂಕಟರಮಣಪ್ಪ ಮತ್ತು ಶಾಸಕ ಮುನಿರಾಜುರವರು ಚುನಾವಣಾ ಪ್ರಚಾರದ ವೇಳೆ ಮುಗಿದಿದ್ದರೂ ಕ್ಷೇತ್ರದಲ್ಲಿ ಠಿಕಾಣಿ ಹೂಡಿ ಮತದಾರರಿಗೆ ಹಣಹಂಚುತ್ತಿದ್ದರೆಂದು ಜೆಡಿಎಸ್ ಕಾರ್ಯಕರ್ತರು ಆರೋಪಿಸಿ ಸಚಿವರ ಕಾರನ್ನ ಅಡ್ಡಗಟ್ಟಿದ್ದರು. ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಬಿಜೆಪಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದು ಜೆಡಿಎಸ್ ಕಾರ್ಯಕರ್ತರು ಸಚಿವರು ಮತ್ತು ಬೆಂಬಲಿಗರಿಗೆ 'ಗೂಸಾ' ನೀಡಿದ್ದರೆಂದು ಸಚಿವರು ದೂರು ದಾಖಲಿಸಿದ್ದರು. ಈ ಸಂದರ್ಭದಲ್ಲಿ ಸಚಿವರು ಮತ್ತು ಬೆಂಬಲಿಗರು ಜೆಡಿಎಸ್ ಕಾರ್ಯಕರ್ತರಿಗೂ ಪ್ರಾಣ ಬೆದರಿಕೆ ಹಾಕಿದ್ದರೆಂದು ಜೆಡಿಎಸ್ ಕಾರ್ಯಕರ್ತರು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದರು 2 ದಿನಗಳ ಕಾಲ ಸುಮ್ಮನಿದ್ದ ಪೋಲೀಸರು, ಇದ್ದಕ್ಕಿದ್ದಂತೆ ಚುನಾವಣೆ ಮುಗಿಯುತ್ತಿದ್ದಂತೆ ಜೆಡಿಎಸ್ ಹುರಿಯಾಳು ಎಂ.ಸಿ.ಅಶ್ವಥ್‌ರವರ ಸಹೋದರ ಕರಿಯಪ್ಪ, ಸತ್ಯನಾರಾಯಣ, ಮೂಲು, ರವಿಕೂರಣಗೆರೆ, ಉದಯ್‌ರನ್ನ ಬಂಧಿಸಲು ಎಂ.ಸಿ.ಅಶ್ವಥ್‌ರ ಮನೆಯ ಸುತ್ತಲೂ ನೂರಾರು ಪೋಲೀಸರೊಂದಿಗೆ ಹಿರಿಯ ಅಧಿಕಾರಿಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಪೋಲೀಸರು ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತು. ಇದನ್ನು ವಿರೋಧಿಸಿ ನೆರೆದಿದ್ದ ಜೆಡಿಎಸ್ ಕಾರ್ಯಕರ್ತರನ್ನ ಚದುರಿಸಲು ಪೊಲೀಸರು ಲಘುಲಾಠಿ ಪ್ರಹಾರ ನಡೆಸಿದರು.
ಇದರಿಂದ ರೊಚ್ಚಿಗೆದ್ದ ಜೆಡಿಎಸ್ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿ ರಸ್ತೆ ತಡೆ ನಡೆಸಿ ಪೋಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಚಿವರು ನೀತಿ ಸಂಹಿತೆ ಉಲ್ಲಂಘಿಸಿ ಗೂಂಡಾಪಡೆಯೊಂದಿಗೆ ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಯತ್ನ ನಡೆಸಿದ್ದರೂ ಸಚಿವರ ವಿರುದ್ದ ಕ್ರಮಕೈಗೊಳ್ಳದೇ ಅಮಾಯಕರಾದ ಕಿರಣ್ ಮತ್ತು ದರ್ಶನ್‌ಎಂಬುವವರನ್ನ ಬಂಧಿಸಲಾಗಿದೆ. ಬಿಜೆಪಿ ಸರ್ಕಾರದ ಸಚಿವರುಗಳ ಅಣತಿಯಂತೆ ಪೋಲೀಸರು ಜೆಡಿಎಸ್ ಕಾರ್ಯಕರ್ತರ ಮೇಲೆ ದೌರ್ಜನ್ಯವೆಸಗುತ್ತಿದ್ದಾರೆಂದು ಜೆಡಿಎಸ್ ಅಭ್ಯರ್ಥಿ ಎಂ.ಸಿ.ಅಶ್ವಥ್ ಪೋಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಚುನಾವಣೆ ಮುಗಿದ ನಂತರ ಎಲೆಕ್ಟ್ರಾನಿಕ್ ಮತಯಂತ್ರಗಳನ್ನ ಸ್ಟ್ರಾಂಗ್‌ರೂಮ್‌ಗೆ ಸಾಗಿಸುವ ಮೊದಲೇ ಹಿರಿಯ ಪೋಲೀಸ್ ಅಧಿಕಾರಿಗಳು ನೂರಾರು ಪೋಲೀಸರೊಂದಿಗೆ ಜೆಡಿಎಸ್ ಕಾರ್ಯಕರ್ತರನ್ನ ಬಂಧಿಸಲು ಮುಂದಾಗಿದ್ದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಮುಖ್ಯವಾಗಿ ಹಿರಿಯ ಅಧಿಕಾರಿಗಳು ಇ.ವಿ.ಎಂ.ಗಳನ್ನ ರಕ್ಷಣೆ ಮಾಡಬೇಕಾಗಿತ್ತು. ಆದರೆ ಇದ್ದಕ್ಕಿದ್ದಂತೆ ಜೆಡಿಎಸ್ ಕಾರ್ಯಕರ್ತರನ್ನ ಬಂಧಿಸಲು ಮುಂದಾಗಿದ್ದರ ಹಿಂದೆ ಬಿಜೆಪಿ ಅಭ್ಯರ್ಥಿ ಯೋಗೀಶ್ವರ್ ಮತ್ತು ಸಚಿವರುಗಳ ಒತ್ತಡ ಕೆಲಸ ಮಾಡಿದೆ ಎಂದು ಅಶ್ವಥ್ ಆರೋಪಿಸಿದರು.
ಬಾಲಕೃಷ್ಣ ಪ್ರವೇಶ : ಜೆಡಿಎಸ್ ಕಾರ್ಯಕರ್ತರ ಮೇಲೆ ಲಾಠಿಪ್ರಹಾರವಾದ ವಿಚಾರ ತಿಳಿಯುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ದೂರವಾಣಿಯ ಮೂಲಕವೇ ಪೋಲೀಸರಿಗೆ ತರಾಟೆಗೆ ತೆಗೆದುಕೊಂಡರು. ಸಚಿವರು ಮತ್ತು ಜನಸಾಮಾನ್ಯರಿಗೂ ಒಂದೇ ಕಾನೂನು ಆದ್ದರಿಂದ ಮೊದಲು ದೌರ್ಜನ್ಯ ನಡೆಸಿದ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡುರವರನ್ನ ಬಂಧಿಸಿ ನಂತರ ಜೆಡಿಎಸ್ ಕಾರ್ಯಕರ್ತರನ್ನ ಬಂಧಿಸಲು ಮುಂದಾಗಿ ಎಂದು ಪೋಲೀಸರಿಗೆ ಹೇಳಿದರು. ಅಷ್ಟರಲ್ಲಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರವೇಶ ಮಾಡಿದರು.
ಮೊದಲು ಸಚಿವರನ್ನ ಬಂಧಿಸಿ ನಂತರ ಜೆಡಿಎಸ್ ಕಾರ್ಯಕರ್ತರನ್ನ ಬಂಧಿಸಲು ಮುಂದಾಗಿ ಇಲ್ಲವಾದರೆ ಮುಂದಾಗುವ ಅನಾಹುತಕ್ಕೆ ಪೋಲೀಸ್ ಇಲಾಖೆಯೇ ನೇರ ಹೊಣೆಗಾರಿಕೆಯನ್ನ ಹೊರಬೇಕಾಗುತ್ತದೆ ಎಂದು ಬಾಲಕೃಷ್ಣ ಎಚ್ಚರಿಸಿದರು. ಪರಿಸ್ಥಿತಿಯ ಗಂಭೀರತೆಯನ್ನ ಅರಿತ ಡಿ.ವೈ.ಎಸ್.ಪಿ ದೇವರಾಜ್ ಬಹಳ ಜಾಣ್ಮೆಯಿಂದ ವಶಕ್ಕೆ ತೆಗೆದುಕೊಂಡಿದ್ದ ದರ್ಶನ್ ಮತ್ತು ಕಿರಣ್ ಎಂಬುವವರನ್ನ ಬಿಡುಗಡೆಗೊಳಿಸಿದರು. ಮತ್ತು ಶಾಸಕ ಬಾಲಕೃಷ್ಣರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿ ಶಾಂತಗೊಳಿಸಿದರು.
-
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ












Click it and Unblock the Notifications