ಬಿಜೆಪಿಯಲ್ಲಿ ಅತೃಪ್ತಿಯಿದೆ ಅಶಿಸ್ತಿಲ್ಲ : ಸದಾನಂದ ಗೌಡ

ಗುರುವಾರ ಬೆಳಿಗ್ಗೆ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ನವೆಂಬರ್ ಕೊನೆಯ ಹಂತದಲ್ಲಿ ರಾಜ್ಯ ಬಿಜೆಪಿ ಘಟಕದ ಚುನಾವಣೆ ನಡೆಯಲಿದ್ದು, ಆನಂತರದಲ್ಲಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.
ರಾಜ್ಯದ ಮಂತ್ರಿಗಳ ಕಾರ್ಯವೈಖರಿ ಕುರಿತು ಈಗಾಗಲೇ ವರದಿಗಳು ಬಂದಿದ್ದು, ಈ ಬಗ್ಗೆ ಉಪಚುನಾವಣೆಯ ಫಲಿತಾಂಶದ ನಂತರದಲ್ಲಿ ಪರಾಮರ್ಶಿಸಿ ಸೂಕ್ತ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗುವುದು. ಮಂತ್ರಿಗಳನ್ನು ಬದಲಾಯಿಸುವ ಅಧಿಕಾರ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ನನ್ನದೇನಿದ್ದರೂ ಸಂಘಟನೆ ಮತ್ತು ಪಕ್ಷ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದ ಗೌಡ ಹೇಳಿದರು.
ಉಪಚುನಾವಣೆಯ ಫಲಿತಾಂಶ ನಾಳೆ ಹೊರಬೀಳಲಿದ್ದು, ಈ ಚುನಾವಣೆಯಲ್ಲಿ ಬಿಜೆಪಿಗೆ ಮೂರು ಮತ್ತೊಂದು ಸ್ಥಾನ ಸಿಗಲಿದೆ ಎಂಬ ಭರವಸೆ ನಮ್ಮದು. ಈ ಚುನಾವಣೆಯ ಫಲಿತಾಂಶ ಪರೋಕ್ಷವಾಗಿ ಸರ್ಕಾರದ ಕಾರ್ಯಕ್ರಮಗಳ ಅಳತೆಗೋಲು ಆಗಲಿದೆ. ಈ ಉಪಚುನಾವಣೆ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಲ್ಲ. ಇದು ಜೆಡಿಎಸ್ ಮತ್ತು ಕಾಂಗ್ರೆಸ್‌ಗೆ ಪ್ರತಿಷ್ಠೆಯ ಪ್ರಶ್ನೆ ಕೂಡ. ಈ ಎರಡೂ ಪಕ್ಷಗಳು ಒಂದು ಸ್ಥಾನ ಕಳೆದುಕೊಂಡರೂ ಅವರ ಪಕ್ಷದ ಸರ್ವನಾಶವಾಗಲಿದೆ ಎಂದು ತಿಳಿಸಿದರು.
ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಇರುವ ಗೊಂದಲವನ್ನು ಬಗೆಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಪಚುನಾವಣೆಯ ನಂತರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ವಿವರಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ, ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಜಿ.ಕುಮಾರಸ್ವಾಮಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಗಿರೀಶ್ ಪಟೇಲ್, ನಗರಸಭಾ ಅಧ್ಯಕ್ಷ ಎನ್.ಜೆ.ರಾಜಶೇಖರ್, ಭಾನುಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications