ಎರಡನೇ ಹುಟ್ಟುಹಬ್ಬಕ್ಕೆ ರಾಮನಗರ ಜಿಲ್ಲೆ ಸಿಂಗಾರ

Ramnagar mini Vidhana Soudha
ರಾಮನಗರ, ಆ. 22 : ಬ್ರಿಟೀಷರ ಕಾಲದಲ್ಲಿ ಕ್ಲೋಸ್‌ಪೇಟೆಯಾಗಿದ್ದ ರಾಮನಗರ ಬ್ರಿಟೀಷರ ವಾಣಿಜ್ಯ ಕೇಂದ್ರವಾಗಿದ್ದ ಇತಿಹಾಸವಿದೆ. ರೇಷ್ಮೆನಗರಿ ಎಂಬ ಖ್ಯಾತಿಯಿರುವ ರಾಮನಗರವನ್ನ ಎಚ್.ಡಿ.ಕುಮಾರಸ್ವಾಮಿಯವರ ಆಡಳಿತಾವಧಿಯಲ್ಲಿ ಜಿಲ್ಲಾ ಕೇಂದ್ರವನ್ನಾಗಿ ಮಾಡಿ ನಾಳೆ ಆಗಸ್ಟ್ 23ಕ್ಕೆ ಎರಡು ವರ್ಷವಾಗಲಿದೆ.

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಅಧಿಕಾರ ಹಿಡಿದಾಗಿನಿಂದ ಇಂದಿನವರೆಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆರಂಭಿಸಿದ್ದ ಅಭಿವೃದ್ದಿ ಕಾಮಗಾರಿಗಳಿಗೆ ಸಮರ್ಪಕ ರೀತಿಯಲ್ಲಿ ಹಣಬಿಡುಗಡೆ ಮಾಡದೆ ನಿರ್ಲಕ್ಷ್ಯ ಮಾಡಿದೆ ಎಂದು ಉಪಚುನಾವಣೆಯಲ್ಲಿ ಆಯ್ಕೆಯಾಗಿರುವ ನೂತನ ಶಾಸಕ ಕೆ.ರಾಜು ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ತ್ವರಿತಗತಿಯಲ್ಲಿ ಸಾಗದೇ ಆಮೆಗತಿಯಲ್ಲಿ ಸಾಗುವಂತಾಗಿ ಕಾಮಗಾರಿಗಳೆಲ್ಲಾ ಅರ್ಧದಲ್ಲೇ ನಿಲ್ಲುವಂತಾಗಿದೆ. ಜಿಲ್ಲಾ ಕೇಂದ್ರವಾಗಿ ಎರಡು ವರ್ಷ ಪೂರೈಸಿದರೂ ಜಿಲ್ಲೆಯ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಯಾವುದೇ ವಿಶೇಷ ಯೋಜನೆಗಳನ್ನ ರೂಪಿಸದೆ ಅಭಿವೃದ್ದಿಗೆ ಅಡ್ಡಗಾಲು ಹಾಕಿದೆ. ಹೋರಾಟಗಳನ್ನ ನಡೆಸಿದರೂ ಬಿಜೆಪಿ ಸರ್ಕಾರ ಮಾತ್ರ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಮುಂದೆಯೂ ಕೂಡ ಇದೇ ರೀತಿ ನಿರ್ಲಕ್ಷ್ಯ ಮಾಡಿ ಕ್ಷೇತ್ರದ ಅಭಿವೃದ್ದಿಗೆ ಬಿಜೆಪಿ ಸರ್ಕಾರ ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದೆಂದು ಕೆ.ರಾಜು ಎಚ್ಚರಿಸಿದ್ದಾರೆ.

ರಾಮನಗರದಲ್ಲಿ ನಡೆಯುತ್ತಿರುವ ಜಿಲ್ಲಾ ಕಛೇರಿಗಳಸಂಕೀರ್ಣ. ಪೋಲೀಸ್ ವರಿಷ್ಠಾಧಿಕಾರಿಗಳ ಕಛೇರಿ ಮತ್ತಿತರ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡದೇ ತಾರತಮ್ಯ ಮಾಡುತ್ತಿದೆ. ಕುಮಾರಸ್ವಾಮಿಯವರ ಕನಸಿನ ಕೂಸಾಗಿರುವ ರಾಜೀವ್‌ಗಾಂಧೀ ಆರೋಗ್ಯವಿವಿ ಕಾಮಗಾರಿ ಆರಂಭಿಸಲು ಕೂಡ ಬಿಜೆಪಿ ಸರ್ಕಾರ ಮೀನಮೇಷ ಎಣಿಸುತ್ತಿದೆ. ಒಟ್ಟಾರೆ ಸರ್ವಾಂಗೀಣ ಅಭಿವೃದ್ದಿ ಕಾಣಬೇಕಾದ ರಾಮನಗರ ಬಿಜೆಪಿ ಸರ್ಕಾರದ ಇಬ್ಬಗೆ ನೀತಿಯಿಂದ ಹಿಂದುಳಿಯುವಂತಾಗಿದೆ. ಬಿಜೆಪಿ ಸರ್ಕಾರದ ದ್ವೇಷದ ರಾಜಕಾರಣಕ್ಕೆ ಹೋರಾಟದ ಮೂಲಕವೇ ಉತ್ತರ ನೀಡುವುದಾಗಿ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷ ಬ್ಯಾಟಪ್ಪ ಎಚ್ಚರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+